ಸರಕಾರಕ್ಕೆ ಸಾವಿರ ದಿನದ ಸಂಭ್ರಮ ಕಂದಾಯ ಇಲಾಖೆ ಮೂಲಕ ಆಚರಣೆ -ಡಿಸಿಎಂ

Contributed byKENCHE GOWDA|Vijaya Karnataka

ರಾಜ್ಯಕ್ಕೆ ಜರ್ಮನಿ ಚಾನ್ಸಲರ್ ಭೇಟಿ ನೀಡಿದಾಗ, ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯ ಅವಕಾಶವನ್ನು ಬಳಸಿಕೊಳ್ಳುವ ಬದಲು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ರಾಹುಲ್ ಗಾಂಧಿ ಸ್ವಾಗತಕ್ಕೆ ತೆರಳಿದ್ದು ಖಂಡನೀಯ. ಇದು ಕರ್ನಾಟಕದ ಹಿತಾಸಕ್ತಿಗೆ ಮಾಡಿದ ದ್ರೋಹ. ಅಧಿಕಾರ ದಾಹದಿಂದ ರಾಜ್ಯಕ್ಕೆ ಬರಬಹುದಾದ ಅವಕಾಶಗಳನ್ನು ಸರ್ಕಾರ ಬಲಿ ಕೊಟ್ಟಿದೆ. ಕನ್ನಡಿಗರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಆರ್. ಅಶೋಕ್ ಆರೋಪಿಸಿದ್ದಾರೆ.

severe criticism to the deputy cm during the visit of the chancellor of germany anger between bjp and congress
ಜರ್ಮನಿ ಚಾನ್ಸಲರ್ ಕರ್ನಾಟಕಕ್ಕೆ ಭೇಟಿ ನೀಡಿದಾಗ, ಅವರನ್ನು ಸ್ವಾಗತಿಸಿ ರಾಜ್ಯಕ್ಕೆ ಅನುಕೂಲ ಮಾಡಿಕೊಡುವ ಬದಲು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಸ್ವಾಗತಕ್ಕೆ ತೆರಳಿದ್ದು ಖಂಡನೀಯ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಕರ್ನಾಟಕದ ಹಿತಾಸಕ್ತಿಗಿಂತ ಹೈಕಮಾಂಡ್ ಆದೇಶವೇ ಮುಖ್ಯವಾಯಿತು ಎಂದು ಅವರು ಪ್ರಶ್ನಿಸಿದ್ದಾರೆ.

ವಿಶ್ವದ ಪ್ರಬಲ ಆರ್ಥಿಕ ಶಕ್ತಿಗಳಲ್ಲಿ ಒಂದಾದ ಜರ್ಮನಿಯ ಚಾನ್ಸಲರ್ ಕರ್ನಾಟಕಕ್ಕೆ ಭೇಟಿ ನೀಡಿದ್ದರು. ಇದನ್ನು ರಾಜ್ಯದಲ್ಲಿ ಹೂಡಿಕೆ, ಉದ್ಯೋಗ ಸೃಷ್ಟಿ ಮತ್ತು ಕೈಗಾರಿಕಾ ಅಭಿವೃದ್ಧಿಯನ್ನು ಹೆಚ್ಚಿಸಿಕೊಳ್ಳುವ ಅವಕಾಶವಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಪರಿಗಣಿಸಿ ಭೇಟಿ ಮಾಡಬೇಕಿತ್ತು ಎಂದು ಆರ್. ಅಶೋಕ್ ಬೇಸರ ವ್ಯಕ್ತಪಡಿಸಿದರು. ಆದರೆ, ನಮ್ಮ ರಾಜ್ಯದ ದುರಾದೃಷ್ಟ ಬೇರೆಯೇ ಆಗಿತ್ತು ಎಂದು ಅವರು ಹೇಳಿದರು.
ಜರ್ಮನಿಯ ಚಾನ್ಸಲರ್ ಬೆಂಗಳೂರಿಗೆ ಬಂದಾಗ, ರಾಜ್ಯದ ನಾಯಕರು ರಾಹುಲ್ ಗಾಂಧಿಯವರ ಸ್ವಾಗತಕ್ಕಾಗಿ ಮೈಸೂರಿನಲ್ಲಿ ಸಾಲುಗಟ್ಟಿ ನಿಂತಿದ್ದರು. ಇದು ಕೇವಲ ಶಿಷ್ಟಾಚಾರದ ಲೋಪವಲ್ಲ, ಕರ್ನಾಟಕದ ಹಿತಾಸಕ್ತಿಗೆ ಮಾಡಿದ ದ್ರೋಹ ಎಂದು ಆರ್. ಅಶೋಕ್ ದೂರಿದರು. ಅಧಿಕಾರ ದಾಹಕ್ಕಾಗಿ ರಾಜ್ಯಕ್ಕೆ ಬರಬಹುದಾದ ಅವಕಾಶಗಳನ್ನೆಲ್ಲ ಬಲಿಗೊಟ್ಟ ಈ ಸರ್ಕಾರಕ್ಕೆ ಕರ್ನಾಟಕದ ಬಗ್ಗೆ, ಕನ್ನಡಿಗರ ಬಗ್ಗೆ ಎಳ್ಳಷ್ಟೂ ಕಾಳಜಿ ಇಲ್ಲ ಎಂಬುದು ಇದರಿಂದ ಸಾಬೀತಾಗಿದೆ ಎಂದು ಅವರು ಹೇಳಿದರು.