ಸಾರ್ವಜನಿಕ ಸ್ಥಳಗಳಿಂದ ಸಾವರ್ಕರ್ ಭಾವಚಿತ್ರ ತೆರವುಗೊಳಿಸುವ ಅರ್ಜಿ ಕ್ಷುಲ್ಲಕ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅರ್ಜಿದಾರರಾದ ಬಿ. ಬಾಲಮುರುಗನ್ ಅವರನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು. ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದಕ್ಕೆ ದಂಡ ವಿಧಿಸುವುದಾಗಿ ಮುಖ್ಯ ನ್ಯಾಯಮೂರ್ತಿ ಎಚ್ಚರಿಸಿದರು. ಅರ್ಜಿದಾರರು ಅರ್ಜಿ ಹಿಂಪಡೆಯಲು ಒಪ್ಪಿಕೊಂಡರು.
ಸಂಸತ್ತು ಮತ್ತು ಇತರ ಸಾರ್ವಜನಿಕ ಸ್ಥಳಗಳಿಂದ ವಿನಾಯಕ ದಾಮೋದರ್ ಸಾವರ್ಕರ್ ಅವರ ಭಾವಚಿತ್ರಗಳನ್ನು ತೆಗೆದುಹಾಕಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಅಂಗೀಕರಿಸಲು ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರಿದ್ದ ಪೀಠ, ಅರ್ಜಿದಾರರಾದ ನಿವೃತ್ತ IRS ಅಧಿಕಾರಿ ಬಿ. ಬಾಲಮುರುಗನ್ ಅವರನ್ನು "ಕ್ಷುಲ್ಲಕ ಕಾರಣಕ್ಕಾಗಿ ಅರ್ಜಿ ಸಲ್ಲಿಸಿದ್ದೀರಿ" ಎಂದು ತರಾಟೆಗೆ ತೆಗೆದುಕೊಂಡಿತು. ನ್ಯಾಯಾಲಯದ ಸಮಯ ವ್ಯರ್ಥ ಮಾಡಿದಕ್ಕೆ ಭಾರಿ ದಂಡ ವಿಧಿಸುವುದಾಗಿ ಎಚ್ಚರಿಸಿದ ಸಿಜೆಐ, ಬಳಿಕ ಅರ್ಜಿದಾರರು ಅರ್ಜಿಯನ್ನು ಹಿಂಪಡೆಯಲು ಒಪ್ಪಿಕೊಂಡರು.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಾಂಚೋಲಿ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠ, ಈ ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಲು ನಿರಾಕರಿಸಿತು. ಅರ್ಜಿದಾರರಾದ ನಿವೃತ್ತ ಭಾರತೀಯ ಕಂದಾಯ ಸೇವೆ ಅಧಿಕಾರಿ ಬಿ. ಬಾಲಮುರುಗನ್ ಅವರ ಉದ್ದೇಶವನ್ನು ಪ್ರಶ್ನಿಸಿದ ನ್ಯಾಯಾಲಯ, "ಕ್ಷುಲ್ಲಕ ಕಾರಣಕ್ಕಾಗಿ ಅರ್ಜಿ ಸಲ್ಲಿಸಿದ್ದೀರಿ" ಎಂದು ಸ್ಪಷ್ಟವಾಗಿ ಹೇಳಿತು.ನ್ಯಾಯಾಲಯದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿದ್ದಕ್ಕಾಗಿ ಅರ್ಜಿದಾರರ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯನ್ನೂ ನ್ಯಾಯಾಲಯ ಸೂಚಿಸಿತು. "ನ್ಯಾಯಾಧಿಲಯದ ಸಮಯವನ್ನು ವ್ಯರ್ಥ ಮಾಡಿರುಧಿವುದಕ್ಕೆ ಭಾರಿ ಮೊತ್ತದ ದಂಡವನ್ನು ನಾವು ವಿಧಿಸಬಹುದು. ಈ ರೀತಿಯ ಅರ್ಜಿ ನಿಮ್ಮ ಮನಸ್ಥಿತಿಯನ್ನು ತೋರಿಸುತ್ತದೆ," ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದರು.
ಈ ತೀವ್ರ ಟೀಕೆಗಳ ನಂತರ, ಅರ್ಜಿದಾರ ಬಿ. ಬಾಲಮುರುಗನ್ ಅವರು ತಮ್ಮ ಅರ್ಜಿಯನ್ನು ಹಿಂಪಡೆಯಲು ಒಪ್ಪಿಕೊಂಡರು. ಈ ಮೂಲಕ ಪ್ರಕರಣ ಅಂತ್ಯಗೊಂಡಿತು.