ಶಿರೂರು ಪರ್ಯಾಯ

Contributed byajitha.m@timesofindia.com|Vijaya Karnataka

ಉಡುಪಿಯಲ್ಲಿ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಅಂಗವಾಗಿ ವಿದ್ಯುತ್ ದೀಪಾಲಂಕಾರವನ್ನು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಉದ್ಘಾಟಿಸಿದರು. ನಗರವು ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. 50 ಲಕ್ಷ ರೂ. ವೆಚ್ಚದಲ್ಲಿ ಈ ಅಲಂಕಾರ ಮಾಡಲಾಗಿದೆ. ಶಾಸಕ ಯಶಪಾಲ್ ಎ. ಸುವರ್ಣ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪರ್ಯಾಯ ಕಾರ್ಯಕ್ರಮಕ್ಕೆ ಮೆರಗು ನೀಡಲು ವಿಶೇಷ ವ್ಯವಸ್ಥೆ ಮಾಡಲಾಗಿದೆ.

shiruru parayaya inauguration of electrical decoration by district collector swaroopa tk

ನಗರ ವಿದ್ಯುದ್ದೀಪಾಲಂಕಾರ ಉದ್ಘಾಟನೆ

ವಿಕ ಸುದ್ದಿಲೋಕ ಉಡುಪಿ

ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ದ್ವೈವಾರ್ಷಿಕ ಪರ್ಯಾಯ ಮಹೋತ್ಸವ ಅಂಗವಾಗಿ ನಗರದಲ್ಲಿಅಳವಡಿಸಿರುವ ವಿದ್ಯುತ್ ದೀಪಾಲಂಕಾರವನ್ನು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಉದ್ಘಾಟಿಸಿದರು.

ನಾನು ಮೊದಲ ಬಾರಿಗೆ ಪರ್ಯಾಯ ಕಾರ್ಯಕ್ರಮದಲ್ಲಿಭಾಗವಹಿಸುತ್ತಿದ್ದೇನೆ. ಸಿಂಗಾರಗೊಂಡ ನಗರಗಳು, ಪರ್ಯಾಯದ ಸಿದ್ಧತೆಗಳು ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವುದು ಸಂತೋಷವಾಗಿದೆ ಎಂದರು.

ನಗರದ ಕೋರ್ಟ್ ರಸ್ತೆಯ ಕೆನರಾ ಬ್ಯಾಂಕ್ ನ ಮುಂಭಾಗದಲ್ಲಿನಡೆದ ಕಾರ್ಯಕ್ರಮದಲ್ಲಿಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಯಶಪಾಲ್ ಎ. ಸುವರ್ಣ ಪರ್ಯಾಯ ಕಾರ್ಯಕ್ರಮಕ್ಕೆ ಹೆಚ್ವಿನ ಮೆರುಗು ನೀಡಲು ಈ ಬಾರಿ ವಿಶೇಷ ವಿದ್ಯುದ್ದೀಪಾಲಂಕಾರ ಮಾಡಲಾಗಿದೆ ಎಂದರು.

ವಿದ್ಯುದ್ದೀಪಾಲಂಕಾರ ವ್ಯವಸ್ಥೆ ಮಾಡಿದ ಕೃಷ್ಣ ಕುಲಾಲ್ ಅವರನ್ನು ಶಾಸಕರು ಅಭಿನಂದಿಸಿದರು. ಶಿರೂರು ಪರ್ಯಾಯಕ್ಕೆ ಉಡುಪಿ ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಇದರ ಮೆರುಗು ಹೆಚ್ಚಿಸಲು ಈ ಬಾರಿ ಉಡುಪಿ ನಗರಸಭೆ ಅನುದಾನದೊಂದಿಗೆ 50 ಲಕ್ಷ ರೂ. ವೆಚ್ಚದಲ್ಲಿವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಕೆನರಾ ಬ್ಯಾಂಕ್ ನ ಜಿ.ಎಂ. ಎಚ್ .ಕೆ. ಗಂಗಾಧರ್ , ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ನಗರ ಸಭೆ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ್ ಪೂಜಾರಿ, ರಜನಿ ಹೆಬ್ಬಾರ್ , ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ್ ಹೆಗ್ಡೆ, ಮಹಿಳಾ ಘಟಕದ ಪದ್ಮಲತಾ, ಬಾಲಕೃಷ್ಣ ಶೆಟ್ಟಿ, ಪ್ರಚಾರ ಸಮಿತಿ ಸಂಚಾಲಕ ನಂದನ್ ಜೈನ್ , ವಿಷ್ಣುಮೂರ್ತಿ ಆಚಾರ್ಯ ಉಪಸ್ಥಿತರಿದ್ದರು.

15ಎಸ್ ಆರ್ ಬಿ ಲೈಟ್