‘ಬಾಲ್ಯವಿವಾಹ ಮುಕ್ತ ಜಿಲ್ಲೆಆಗಲಿ’

Contributed bydevarajanayaka75@gmail.com|Vijaya Karnataka
Vijay Karnataka

‘ಬಾಲ್ಯವಿವಾಹ ಮುಕ್ತ ಜಿಲ್ಲೆಆಗಲಿ’

*ಕಾರ್ಯಾಗಾರ ಉದ್ಘಾಟನೆ

ವಿಕ ಸುದ್ದಿಲೋಕ ವಿಜಯನಗರ(ಹೊಸಪೇಟೆ)

‘‘ಬಾಲ್ಯ ವಿವಾಹ ಮುಕ್ತ ಜಿಲ್ಲೆಮಾಡಲು ಇಲಾಖೆ ಜತೆಗೆ ಸಾರ್ವಜನಿಕರು ಕೈಜೋಡಿಸಬೇಕು’’ ಎಂದು ಜಿ.ಪಂ. ಸಿಇಒ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಜಿಲ್ಲಾಡಳಿತ, ಜಿ.ಪಂ., ಜಿಲ್ಲಾಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕೊಪ್ಪಳದ

ಯುನಿಸೆಫ್ ಸಂಸ್ಥೆಯ ಸಹಯೋಗದಲ್ಲಿಬಾಲ್ಯವಿವಾಹ, ಪೋಕ್ಸೊ ಕಾಯಿದೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಕಾವಲು ಸಮಿತಿ ಕುರಿತು

ಪಿಡಿಒಗಳಿಗೆ ಶುಕ್ರವಾರ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

‘‘ಜಿಲ್ಲಾದ್ಯಂತ ಬಾಲ್ಯವಿವಾಹ, ಪೋಕ್ಸೊ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವಲ್ಲಿಪಿಡಿಒ ಹಾಗೂ ಅಧಿಕಾರಿಗಳು ಸಮನ್ವಯತೆಯಿಂದ

ಕಾರ್ಯನಿರ್ವಹಿಸಬೇಕು’’

‘‘ಜಿಲ್ಲೆಯಲ್ಲಿಬಾಲ್ಯವಿವಾಹ, ಪೋಕ್ಸೊ ಪ್ರಕರಣ ದಾಖಲಾಗುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿವೆ. ಸ್ಥಳೀಯ ಮಟ್ಟದಲ್ಲಿಇಂತಹ ಪ್ರಕರಣಗಳು ದಾಖಲಾಗದಂತೆ ಕಾರ್ಯನಿರ್ವಹಿಸಬೇಕಿದೆ. ಶಾಲಾ ಹಂತದಲ್ಲಿಒಂದು ಮಗುವೂ ಶಿಕ್ಷಣದಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಹುಡುಗಿಯರು ಶಿಕ್ಷಣದಿಂದ ದೂರ ಉಳಿಯದಂತೆ ಅಧಿಕಾರಿಗಳು ಮತ್ತು ಶಿಕ್ಷಕರು ಎಚ್ಚರಿಕೆ ವಹಿಸಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿಕಾವಲು ಸಮಿತಿ ರಚಿಸಿದ್ದು ಸರಿಯಾಗಿ ಸಮಯಕ್ಕೆ ಸಭೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು,’’ ಎಂದು ಹೇಳಿದರು. ಗ್ರಾಮೀಣ ಪ್ರದೇಶದ ಶಾಲಾ, ಕಾಲೇಜುಗಳಲ್ಲಿಬಾಲ್ಯವಿವಾಹ, ಬಾಲ ಕಾರ್ಮಿಕ ಕಾಯಿದೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾದ ರಾಘವೇಂದ್ರ ಭಟ್ ಉಪನ್ಯಾಸ ನೀಡಿದರು. ಜಿಲ್ಲಾಮಕ್ಕಳ ರಕ್ಷಣಾಧಿಕಾರಿ ಮುದುಕಪ್ಪ, ಜಿಲ್ಲಾವಿಶೇಷ ಚೇತನರ ಕಲ್ಯಾಣಾಧಿಕಾರಿ ರಾಮಾಂಜನೇಯ ಇದ್ದರು.

ಎಚ್ ಪಿಟಿ16ದೇವರಾಜ03: ಹೊಸಪೇಟೆಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿಶುಕ್ರವಾರ ನಡೆದ ಕಾರ್ಯಾಗಾರವನ್ನು ಸಿಇಒ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ ಉದ್ಘಾಟಿಸಿದರು.