ಜ.22ರಂದು ಮಕ್ಕಳಿಗಾಗಿ ವಿವಿಧ ಸ್ಪರ್ಧೆ

Contributed bymadhugirinews@gmail.com|Vijaya Karnataka

ತುಮಕೂರಿನಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಮಕ್ಕಳಿಗಾಗಿ ಚಿತ್ರಕಲೆ ಮತ್ತು ದೇಶಭಕ್ತಿ ಗೀತೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಜನವರಿ 22ರಂದು ಬೆಳಗ್ಗೆ 11 ಗಂಟೆಗೆ ಈ ಸ್ಪರ್ಧೆಗಳು ನಡೆಯಲಿವೆ. 5 ರಿಂದ 16 ವರ್ಷದೊಳಗಿನ ಮಕ್ಕಳು ಚಿತ್ರಕಲೆಯಲ್ಲಿ, 5 ರಿಂದ 12 ವರ್ಷದೊಳಗಿನ ಮಕ್ಕಳು ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಆಸಕ್ತರು ಜನವರಿ 20ರ ಸಂಜೆ 4ರೊಳಗೆ ಜಿಲ್ಲಾ ಬಾಲಭವನದಲ್ಲಿ ಹೆಸರು ನೊಂದಾಯಿಸಿಕೊಳ್ಳಬೇಕು. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು.

art and patriotic song competitions for children on jan 22

ತುಮಕೂರು: ಜಿಲ್ಲಾಬಾಲಭವನ ಸಮಿತಿಯಿಂದ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ 5-16ರ ವಯೋಮಾನದ ಮಕ್ಕಳಿಗೆ ಚಿತ್ರಕಲೆ ಸ್ಪರ್ಧೆ ಮತ್ತು 5-12ರ ವಯೋಮಾನದ ಮಕ್ಕಳಿಗೆ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಜನವರಿ 22ರಂದು ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಆಸಕ್ತ ಮಕ್ಕಳ ಪೋಷಕರು ಜ.20ರ ಸಂಜೆ 4 ಗಂಟೆಯೊಳಗೆ ಜಿಲ್ಲಾಬಾಲಭವನ ಕಚೇರಿ, ಮಹಾತ್ಮ ಗಾಂಧಿ ರಸ್ತೆ, ತುಮಕೂರು ಇಲ್ಲಿಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಚಿತ್ರಕಲೆ ಸ್ಪರ್ಧೆಗೆ 150 ಮಕ್ಕಳು ಮತ್ತು ದೇಶಭಕ್ತಿ ಗೀತೆ ಸ್ಪರ್ಧೆಗೆ 50 ಮಕ್ಕಳಿಗೆ ಮಾತ್ರ ಭಾಗವಹಿಸಲು ಅವಕಾಶವಿರುವುದರಿಂದ ಮೊದಲು ನೋಂದಾಯಿಸಿಕೊಂಡವರಿಗೆ ಮಾತ್ರ ಆದ್ಯತೆ ನೀಡಲಾಗುವುದು. ಹೆಚ್ಚಿನ ವಿವರಗಳಿಗೆ ಮೊ.ಸಂ.-9901890079ನ್ನು ಸಂಪರ್ಕಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿತಿಳಿಸಿದ್ದಾರೆ.