ಮುಖಂಡ ಶಿವಶಂಕರ್
ವಿಕ ಸುದ್ದಿಲೋಕ ಲಕ್ಕೂರು
ಲಕ್ಕೂರು ಗ್ರಾಮದ ಪೊಲೀಸ್ ಠಾಣೆಯ ಮುಂಭಾಗದಲ್ಲಿರುವ ಎಸ್ಸಿ ಕಾಲೊನಿ ನಿವಾಸಿ, ಮುಖಂಡ ಶಿವಶಂಕರ್ (54) ಅವರು ಹೃದಯಾಘಾತದಿಂದ ನಿಧನರಾದರು.
ಶಿವಶಂಕರ್ ಅವರು ಎಸ್ಸಿ ಸಮುದಾಯದ ಮುಖಂಡರಾಗಿ ಗುರುತಿಸಿಕೊಂಡಿದ್ದರು. 2004ರಲ್ಲಿನಡೆದ ಮಾಲೂರು ವಿಧಾನಸಭೆ ಕ್ಷೇತ್ರದಿಂದ ರಾಮ್ ವಿಲಾಸ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ನಂತರ ಬಿಜೆಪಿಯಲ್ಲಿಗುರುತಿಸಿಕೊಂಡು ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಿದ್ದರು. ಬೆಂಗಳೂರಿನಲ್ಲಿವಾಸವಾಗಿದ್ದ ಶಿವಶಂಕರ್ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಂಜೆ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತದೇಹವನ್ನು ಗ್ರಾಮಕ್ಕೆ ತಂದು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಜನಪ್ರತಿನಿಧಿಗಳು, ಮುಖಂಡರು, ಸಂಬಂಧಿಕರು ಅಂತಿಮ ದರ್ಶನ ಪಡೆದರು. ಶುಕ್ರವಾರ ಮಧ್ಯಾಹ್ನ ಅಂತಿಮ ಕಾರ್ಯಗಳು ನಡೆಯಿತು.
16 ಲಕ್ಕೂರು ಪೋಟೊ 1. ಶಿವಶಂಕರ್ , ನಿಧನ

