16ವೈಡಿಆರ್ 6
ಯಾದಗಿರಿಯಲ್ಲಿಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅಧ್ಯಕ್ಷತೆಯಲ್ಲಿಗಣರಾಜ್ಯೋತ್ಸವ ದಿನಾಚರಣೆ ಕುರಿತು ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.
ಜಿಲ್ಲಾಧಿಕಾರಿ ಕಚೇರಿಯಲ್ಲಿಗಣರಾಜ್ಯೋತ್ಸವ ದಿನಾಚರಣೆ ಕುರಿತು ಪೂರ್ವ ಸಿದ್ಧತಾ ಸಭೆ
ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆಗೆ ಸೂಚನೆ
ವಿಕ ಸುದ್ದಿಲೋಕ ಯಾದಗಿರಿ
ಜಿಲ್ಲಾಡಳಿತದ ವತಿಯಿಂದ ಜ.26ರಂದು ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅಧ್ಯಕ್ಷತೆಯಲ್ಲಿನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿನಿರ್ಣಯ ಕೈಗೊಳ್ಳಲಾಯಿತು.
ಹರ್ಷಲ್ ಭೋಯರ್ ಮಾತನಾಡಿ, ಅಂದು ಬೆಳಗ್ಗೆ 7ರಿಂದ 8ರವರೆಗೆ ಸರಕಾರಿ ಕಚೇರಿಗಳಲ್ಲಿ, ಶಾಲಾ, ಕಾಲೇಜುಗಳಲ್ಲಿರಾಷ್ಟ್ರ ಧ್ವಜಾರೋಹಣ ನೆರವೇರಿಸಬೇಕು. ನಂತರ ನಗರದ ಜಿಲ್ಲಾಡಳಿತ ಭವನದಲ್ಲಿರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಗುತ್ತದೆ ಎಂದರು.
ಬೆಳಗ್ಗೆ 9 ಕ್ಕೆ ನಗರದ ಜಿಲ್ಲಾಕ್ರೀಡಾಂಗಣದಲ್ಲಿಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದು, ಇದಕ್ಕಾಗಿ ಸೂಕ್ತ, ಶಾಮಿಯಾನ,ಮೈದಾನದ ಸ್ವಚ್ಛತೆ, ನಿರಂತರ ವಿದ್ಯುತ್ , ವೇದಿಕೆ ಸಿದ್ಧತೆ, ಗಣ್ಯರಿಗೆ ಸೂಕ್ತ ಆಸನದ ವ್ಯವಸ್ಥೆ ಮಾಡಬೇಕು. ಶಿಷ್ಟಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಬೇಕು. ಆಹ್ವಾನ ಪತ್ರಿಕೆ ಮುದ್ರಿಸಿ, ವಿತರಣೆಗೆ ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ರಂಗೋಲಿ ಸ್ಪರ್ಧೆ ಏರ್ಪಡಿಸಿ ಭಾಗವಹಿಸಿದವರಲ್ಲಿ, ಮೂವರಿಗೆ ಬಹುಮಾನ ನೀಡಬೇಕು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ಅವಶ್ಯಕ ಸಿದ್ಧತೆ ಮಾಡಿಕೊಳ್ಳಬೇಕು. ಸಾಮಾಜಿಕ ಸೇವೆ, ಕಲೆ,ಸಾಹಿತ್ಯ, ಸಂಗೀತ,ನೃತ್ಯ, ಇತ್ಯಾದಿ ಕ್ಷೇತ್ರಗಳಲ್ಲಿಸಾಧನೆ ಮಾಡಿದವರಿಗೆ ಸನ್ಮಾನಿಸಬೇಕು. ಪಥಸಂಚಲನಕ್ಕೆ ಪೂರ್ವತಯಾರಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಇದಕ್ಕೂ ಮುನ್ನದಿನ ಎಲ್ಲಾವೃತ್ತದ ಪುತ್ಥಳಿಗಳಿಗೆ, ಕಚೇರಿಗಳಿಗೆ, ಜಿಲ್ಲಾಡಳಿತ ಭವನಕ್ಕೆ ದೀಪಾಲಂಕಾರ ಮಾಡಬೇಕು. ಗಣರಾಜ್ಯೋತ್ಸವ ದಿನದಂದು ಫಲ ಪುಷ್ಪಪ್ರದರ್ಶನ ನಡೆಯುವ ಲುಂಬಿನಿವನದ ಸ್ವಚ್ಛತೆ ಮಾಡಬೇಕು. ವಿವಿಧ ಇಲಾಖೆಗಳ ವಸ್ತುಪ್ರದರ್ಶನ ಹಾಗೂ ಮಾರಾಟ ಮಳಿಗೆ ಸ್ಥಾಪಿಸಬೇಕು. ಸಂಜೆ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧಗೊಳಿಸುವ ಜೊತೆಗೆ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಗಣರಾಜ್ಯೋತ್ಸವ ದಿನ ಸೂಕ್ತ ಪೋಲಿಸ್ ಬಂದೋಬಸ್ ್ತ, ನುರಿತ ವೈದ್ಯರ ತಂಡ ಒಳಗೊಂಡ ಆರೋಗ್ಯ ಇಲಾಖೆ ಆ್ಯಂಬುಲೆನ್ಸ್ , ಅಗ್ನಿಶಾಮಕ ವಾಹನದ ವ್ಯವಸ್ಥೆ ಮಾಡಬೇಕು. ಈ ಎಲ್ಲಕಾರ್ಯಕ್ರಮಗಳ ಯಶಸ್ವಿಗೆ ವಿವಿಧ ಅಧಿಕಾರಿಗಳ ನೇತೃತ್ವದ ಸಮಿತಿಗಳನ್ನು ರಚಿಸಲಾಗಿದ್ದು, ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.
ಈ ಸಭೆಯಲ್ಲಿಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ್ , ಹೆಚ್ಚುವರಿ ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ಧರಣೇಶ ಸೇರಿ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

