ಮಾದಕ ವಸ್ತು ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ

Contributed bynasirmnkodagu@gmail.com|Vijaya Karnataka

ಜಿಲ್ಲಾಧಿಕಾರಿ ಎಸ್‌.ಜೆ.ಸೋಮಶೇಖರ್‌ ಅವರು ಮಾದಕ ವಸ್ತುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಶಾಲಾ-ಕಾಲೇಜು ವಿದ್ಯಾರ್ಥಿನಿಲಯಗಳು ಸೇರಿದಂತೆ ಎಲ್ಲೆಡೆ ಅರಿವು ಮೂಡಿಸಬೇಕು. ಯುವಜನರು ಮಾದಕ ವಸ್ತುಗಳ ಚಟಕ್ಕೆ ತುತ್ತಾಗಿ ಜೀವನ ಹಾಳುಮಾಡಿಕೊಳ್ಳುತ್ತಿದ್ದಾರೆ. ಆರೋಗ್ಯ, ಶಿಕ್ಷಣ, ಸಮಾಜ ಕಲ್ಯಾಣ ಸೇರಿದಂತೆ ನಾನಾ ಇಲಾಖೆಗಳು ಜಾಗೃತಿ ಮೂಡಿಸಬೇಕು. ಗಡಿ ಭಾಗದಲ್ಲಿ ಎಚ್ಚರ ವಹಿಸಿ, ವಾಹನ ಮತ್ತು ಪ್ರಯಾಣಿಕರ ತಪಾಸಣೆ ಮಾಡಬೇಕು. ಡ್ರಗ್‌ ಟೆಸ್ಟ್‌ ಕಿಟ್‌ಗಳನ್ನು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಸ್ತಾನು ಮಾಡಿಕೊಳ್ಳಬೇಕು. ಶಾಲಾ-ಕಾಲೇಜುಗಳಲ್ಲಿ ಯಾದೃಚ್ಛಿಕ ಪರೀಕ್ಷೆ ನಡೆಸಬೇಕು.

awareness about drug use in educational institutions

ಶಾಲಾ-ಕಾಲೇಜು ವಿದ್ಯಾರ್ಥಿನಿಲಯಗಳು ಸೇರಿದಂತೆ ಎಲ್ಲೆಡೆ ಅರಿವು ಮೂಡಿಸಿ: ಡಿಸಿ ಎಸ್ .ಜೆ.ಸೋಮಶೇಖರ್ ಸೂಚಿಸಿ

ವಿಕ ಸುದ್ದಿಲೋಕ ಮಡಿಕೇರಿ

ಇತ್ತೀಚಿನ ದಿನಗಳಲ್ಲಿಮಾದಕ ವಸ್ತುಗಳ ಜಾಲ ಎಲ್ಲಡೆ ಕೇಳಿ ಬರುತ್ತಿದ್ದು, ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಎಸ್ .ಜೆ.ಸೋಮಶೇಖರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಜಿಲ್ಲಾಮಟ್ಟದ ಮಾದಕ ವಸ್ತು ದ್ರವ್ಯ ಸಮನ್ವಯ ಕೇಂದ್ರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘‘ಯುವಜನರು ಮಾದಕ ವಸ್ತುಗಳ ಚಟಕ್ಕೆ ತುತ್ತಾಗಿ, ಇಡೀ ಜೀವನವನ್ನೇ ಹಾಳುಮಾಡಿ ಕೊಳ್ಳುತ್ತಿದ್ದಾರೆ. ಆದ್ದರಿಂದ ಈ ಬಗ್ಗೆ ಶಾಲಾ-ಕಾಲೇಜು ವಿದ್ಯಾರ್ಥಿನಿಲಯಗಳು ಸೇರಿದಂತೆ ಎಲ್ಲೆಡೆ ಅರಿವು ಮೂಡಿಸಬೇಕು. ಈ ಬಗ್ಗೆ ಕಾರ್ಯಕ್ರಮ ಆಯೋಜಿಸಬೇಕು,’’ ಎಂದು ಸಲಹೆ ನೀಡಿದರು.

‘‘ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಹಾಗೂ ಕಾಲೇಜು ಶಿಕ್ಷಣ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಸಮಗ್ರ ಗಿರಿಜನ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಕೃಷಿ, ತೋಟಗಾರಿಕೆ, ಪಶುಪಾಲನೆ, ಯುವ ಸಬಲೀಕರಣ, ಕಾರ್ಮಿಕ, ಹೀಗೆ ನಾನಾ ಇಲಾಖೆಗಳು ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ಕೆಟ್ಟ ಪರಿಣಾಮ ಕುರಿತು ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿಜಾಗೃತಿ ಮೂಡಿಸುವಂತಾಗಬೇಕು,’’ ಎಂದು ನಿರ್ದೇಶನ ನೀಡಿದರು.

ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ನಿತಿನ್ ಚಕ್ಕಿ ಮಾತನಾಡಿ, ‘‘ಜಿಲ್ಲೆಯ ಹೋಂ ಸ್ಟೇ ಗಳಲ್ಲಿಯೂ ರಾರ ಯಂಡಮ್ ಆಗಿ ಪರೀಕ್ಷಿಸುವಂತಾಗಬೇಕು,’’ ಎಂದು ಸಲಹೆ ನೀಡಿದರು.

‘‘ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಶ ಮುಕ್ತ ಭಾರತ ಹೆಸರಿನಲ್ಲಿಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ,’’ ಎಂದು ಡಿಎಚ್ ಒ ಡಾ.ಸತೀಶ್ ಕುಮಾರ್ ಹೇಳಿದರು.

‘‘ಮಾದಕ ವಸ್ತುಗಳಿಗೆ ತುತ್ತಾದವರಿಗೆ ಪುನರ್ ವಸತಿ ಕಲ್ಪಿಸುವಂತಾಗಬೇಕು. ಆ ನಿಟ್ಟಿನಲ್ಲಿಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿಈ ಬಗ್ಗೆ ಪರಿಶೀಲಿಸಬೇಕು,’’ ಎಂದು ಜಿಲ್ಲಾಧಿಕಾರಿ ಸೋಮಶೇಖರ್ ಇದೇ ಸಂದರ್ಭದಲ್ಲಿಸಲಹೆ ನೀಡಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ , ಸಹಾಯಕ ಔಷಧ ನಿಯಂತ್ರಣಾಧಿಕಾರಿ ಅಜಯ್ ರಾಜ್ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸೆಂಥಿಲ್ ಕುಮಾರ್ , ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜು, ಡಿವೈಎಸ್ ಪಿ ಸೂರಜ್ ಹಲವು ಮಾಹಿತಿ ನೀಡಿದರು.

ಗಡಿಭಾಗದಲ್ಲಿಎಚ್ಚರ ಅಗತ್ಯ:

ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಮಾತನಾಡಿ, ‘‘ಮಾದಕ ವಸ್ತುಗಳ ಜಾಲವು ಎಲ್ಲೆಡೆ ಕೇಳಿ ಬರುತ್ತಿದ್ದು, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕಿದೆ. ಆ ನಿಟ್ಟಿನಲ್ಲಿಜಿಲ್ಲೆಯ ಗಡಿ ಭಾಗದಲ್ಲಿಹೆಚ್ಚಿನ ಎಚ್ಚರ ವಹಿಸಬೇಕಿದೆ,’’ ಎಂದರು.

‘‘ಅಂತಾರಾಜ್ಯ ಗಡಿ ಪ್ರದೇಶದ ಚೆಕ್ ಪೋಸ್ಟ್ ಗಳಲ್ಲಿವಾಹನ ಮತ್ತು ಪ್ರಯಾಣಿಕರ ತಪಾಸಣೆ ಮಾಡಬೇಕಿದೆ. ಮಾದಕ ವಸ್ತುಗಳ ಸೇವನೆ ಕಂಡುಬಂದಲ್ಲಿಹತ್ತಿರದ ಸರಕಾರಿ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡುವಂತಾಗಬೇಕು. ಆ ನಿಟ್ಟಿನಲ್ಲಿಡ್ರಗ್ ಟೆಸ್ಟ್ ಕಿಟ್ ಅನ್ನು ಎಲ್ಲಾಸರಕಾರಿ ಆಸ್ಪತ್ರೆಗಳಲ್ಲಿದಾಸ್ತಾನು ಮಾಡಿಕೊಳ್ಳಬೇಕು,’’ ಎಂದು ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ಸಲಹೆ ನೀಡಿದರು.

ರಾರ ಯಂಡಮ್ ಆಗಿ ಪರೀಕ್ಷೆ ಮಾಡಬೇಕು:

‘‘ಶಾಲಾ- ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿರಾರ ಯಂಡಮ್ ಆಗಿ ಪರೀಕ್ಷೆ ಮಾಡುವಂತಾಗಬೇಕು. ಸಂಶಯ ಕಂಡುಬಂದಲ್ಲಿಪರೀಕ್ಷೆ ಮಾಡಬೇಕು. ಆ ನಿಟ್ಟಿನಲ್ಲಿಮಾದಕ ವಸ್ತುಗಳ ಬಳಕೆ ತಡೆಯಲು ಎಲ್ಲರೂ ಕೈಜೋಡಿಸಬೇಕು. ಕೆಮಿಕಲ್ ಹೆಸರಿನಲ್ಲಿಡ್ರಗ್ಸ್ ತಯಾರು ಮಾಡುವ ಬಗ್ಗೆ ಅಲ್ಲಲ್ಲಿಕೇಳಿ ಬರುತ್ತಿದೆ. ಈ ಬಗ್ಗೆಯೂ ಹೆಚ್ಚಿನ ಎಚ್ಚರ ವಹಿಸುವಂತಾಗಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿಮಾದಕ ವಸ್ತುಗಳಿಗೆ ಸಂಬಂಧಿಸಿದಂತೆ 58 ಪ್ರಕರಣಗಳು ದಾಖಲಾಗಿದ್ದು, ಸುಮಾರು ಎರಡೂವರೆ ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ,’’ ಎಂದರು.

ಫೋಟೊ: ಒಆಏ31ಓ- ಒಂಆಂಏಂ ಗಿಂTಖಿಊW ಆಅ ಒಇಇಖಿಋಓಉ

ಕ್ಯಾಪ್ಷನ್ : ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಜಿಲ್ಲಾಮಟ್ಟದ ಮಾದಕ ವಸ್ತು ದ್ರವ್ಯ ಸಮನ್ವಯ ಕೇಂದ್ರ ಸಭೆಯು ಜಿಲ್ಲಾಧಿಕಾರಿ ಸೋಮಶೇಖರ್ ಅಧ್ಯಕ್ಷತೆಯಲ್ಲಿನಡೆಯಿತು.