ಎನ್ನೆಸ್ಸೆಸ್ ವಾರ್ಷಿಕ ಶಿಬಿರ ಉದ್ಘಾಟನೆ
ವಿಕ ಸುದ್ದಿಲೋಕ ಬಂಟ್ವಾಳ
ಬಂಟ್ವಾಳ ಎಸ್ .ವಿ.ಎಸ್ .ಕಾಲೇಜಿನ ಎನ್ನೆಸ್ಸೆಸ್ ವಾರ್ಷಿಕ ಶಿಬಿರ ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿಆರಂಭಗೊಂಡಿತು.
ಈ ಸಂದರ್ಭ ಶಿಬಿರ ಉದ್ಘಾಟಿಸಿ ಮಾತನಾಡಿದ ಸರಕಾರಿ ಪ್ರೌಢಶಾಲೆ ಎಸ್ .ಡಿ.ಎಂ.ಸಿ. ಅಧ್ಯಕ್ಷ ಶಿವಶಂಕರ ರಾವ್ , ವಿದ್ಯಾರ್ಥಿಯು ಕೇವಲ ಅಧ್ಯಯನಕ್ಕೆ ಸೀಮಿತವಾಗಿರದೆ ಸಾಮಾಜಿಕ ಜೀವನದ ಆಗುಹೋಗುಗಳ ಬಗ್ಗೆ ಅರಿವಿರಬೇಕು. ಆಗ ಮಾತ್ರ ಅವನು ಸಂಘಜೀವಿಯಾಗಲು ಸಾಧ್ಯ ಎಂದರು.
ಶ್ರೀ ವೆಂಕಟರಮಣಸ್ವಾಮಿ ಕಾಲೇಜು ಪ್ರಿನ್ಸಿಪಾಲ್ ಎಂ.ಡಿ. ಮಂಚಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಾವುದೇ ವಿದ್ಯಾರ್ಥಿಗೆ ಶೈಕ್ಷಣಿಕ ಪ್ರಗತಿಯೊಂದಿಗೆ ನೈತಿಕ ಹಾಗೂ ಸಾಮಾಜಿಕ ಪ್ರಗತಿ ಅತಿಮುಖ್ಯ ಅದು ಶಾಲಾ ಕಾಲೇಜುಗಳಿಗಿಂತ ಈ ರೀತಿಯ ಶಿಬಿರಗಳಿಂದ ದೊರಕುತ್ತದೆ ಎಂದರು.
ಕೊಳ್ನಾಡು ಸಾಲೆತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷ ಉಮಾನಾಥ ರೈ ಮೇರಾವು ವಹಿಸಿದ್ದರು. ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ರಾಮ್ ಪ್ರಸಾದ್ ರೈ ತಿರುವಾಜೆ, ಮಂಚಿ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸುಶೀಲ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶಿವಣ್ಣ ಪ್ರಭು ಎನ್ನೆಸ್ಸೆಸ್ ಶಿಬಿರದ ಮಹತ್ವವನ್ನು ತಿಳಿಸಿದರು. ಸರಕಾರಿ ಪ್ರೌಢಶಾಲೆಯ ಶಿಕ್ಷಕ ತಾರಾನಾಥ ಕೈರಂಗಳ, ಎನ್ನೆಸ್ಸೆಸ್ ಘಟಕ ನಾಯಕರಾದ ಕರಿಷ್ಮಾ ಮತ್ತು ಅಮಿತ್ ಪ್ರಭು ಉಪಸ್ಥಿತರಿದ್ದರು. ಎನ್ನೆಸ್ಸೆಸ್ ಕಾರ ್ಯಕ್ರಮ ಅಧಿಕಾರಿ ಡಾ.ಕಾಶೀನಾಥ ಶಾಸ್ತ್ರಿ ಎಚ್ .ವಿ. ಸ್ವಾಗತಿಸಿದರು. ಪ್ರಾಧ್ಯಾಪಕಿ ನಿರೀಕ್ಷಾ ವಂದಿಸಿದರು. ಉಪನ್ಯಾಸಕಿ ಕಾವ್ಯ ನಿರೂಪಿಸಿದರು.
....
ಚಿತ್ರ: 31ಬಿಎಚ್ ಎಸ್ .ವಿ.ಎಸ್ . ಎನ್ .ಎಸ್ .ಎಸ್ .
ಬಂಟ್ವಾಳ ಎಸ್ .ವಿ.ಎಸ್ . ಕಾಲೇಜಿನ ಎನ್ನೆಸ್ಸೆಸ್ ಶಿಬಿರ ಮಂಚಿ ಕೊಳ್ನಾಡು ಹೈಸ್ಕೂಲ್ ನಲ್ಲಿಆರಂಭಗೊಂಡಿತು.

