‘ಸ್ವಚ್ಛ ಪರಿಸರದಿಂದ ರೋಗಮುಕ್ತಿ’

Contributed byyallappatalawar728@gmail.com|Vijaya Karnataka

ರಾಯಬಾಗದಲ್ಲಿ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ನಡೆಯಿತು. ಸ್ವಚ್ಛ ಪರಿಸರದಿಂದ ರೋಗಗಳನ್ನು ತಡೆಗಟ್ಟಬಹುದು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸಿರೊಟ್ಟಿ ತಿಳಿಸಿದರು. ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಕಾರ್ಯಕ್ರಮ ಆಯೋಜಿಸಿತ್ತು. ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತಾ ಕಾಯಕ್ರಮಕ್ಕೆ ಚಾಲನೆ ನೀಡಲಾಯಿತು. ಹಲವು ನ್ಯಾಯಾಧೀಶರು, ವಕೀಲರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

clean environment for disease free living justice jagadish bisirottis remarks

ರಾಯಬಾಗ: ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದರಿಂದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸಿರೊಟ್ಟಿ ಹೇಳಿದರು. ಪಟ್ಟಣದ ನ್ಯಾಯಾಲಯದ ಆವರಣದಲ್ಲಿತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸ್ವಚ್ಛತಾ ದಿನ ಕಾಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹೆಚ್ಚುವರಿ ದಿವಾಣಿ ನ್ಯಾಯಾ

ಧೀಶ ದಾನಪ್ಪ, ವಕೀಲರ ಸಂಘದ ಅಧ್ಯಕ್ಷ ಕೆ.ಆರ್ .ಕೋಟಿವಾಲೆ, ಎಸ್ .ಎಂ. ಸಲಗರೆ, ಎಂ.ಎಂ. ಪಾಟೀಲ ಹಾಗೂ ನ್ಯಾಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.