ವಿಕ ಸುದ್ದಿಲೋಕ ಮಂಡ್ಯ
ಸಮಾನತೆಯಿಂದ ಮಾತ್ರ ಲಿಂಗ ತಾರತಮ್ಯವಿರದ ಸಮಾಜ ಸೃಷ್ಟಿಯಾಗುತ್ತದೆ ಎಂದು ಜಿ.ಪಂ ಸಿಇಓ ಕೆ.ಆರ್ .ನಂದಿನಿ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಅರಕೇಶ್ವರನಗರ ಬಡಾವಣೆಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿಜಿಲ್ಲಾಡಳಿತ, ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ನಡೆದ ‘ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿಹೆಣ್ಣು-ಗಂಡು ಎಂಬ ಭೇದ-ಭಾವವಿಲ್ಲದೆ ಸಮಾಜದಲ್ಲಿಎಲ್ಲರೂ ಒಂದೇ ಎನ್ನುವ ಭಾವನೆಯನ್ನು ಬೆಳೆಸಿಕೊಳ್ಳಬೇಕು. ಆಗ ಮಾತ್ರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಕಾರ ್ಯಕ್ರಮ ಅರ್ಥಪೂರ್ಣತೆ ಕಂಡುಕೊಳ್ಳಲಿದೆ ಎಂದು ಹೇಳಿದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಮಾತನಾಡಿ, ಮಕ್ಕಳು ದೇಶದ ದೊಡ್ಡ ಸಂಪತು, ಅದರಲ್ಲೂಹೆಣ್ಣು ಮಕ್ಕಳ ರಕ್ಷಣೆ ಬಹಳ ಮುಖ್ಯ. ಹೆಣ್ಣು ಮಕ್ಕಳ ಶಿಕ್ಷಣ , ಆರೋಗ್ಯ, ಲಿಂಗ ಸಮಾನತೆ ಮತ್ತು ಸಬಲೀಕರಣದ ಮೇಲೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕೇಂದ್ರೀಕರಿಸಲಾಗಿದೆ. ಅಂತೆಯೇ ಉಜ್ವಲ ಭವಿಷ್ಯಕ್ಕಾಗಿ ಹೆಣ್ಣು ಮಕ್ಕಳನ್ನು ಸಬಲೀಕರಣಗೊಳಿಸುವುದು ಎಂಬ ಆಶಯದಡಿ ಕಾರ ್ಯಕ್ರಮ ನಡೆಯುತ್ತಿದೆ ಎಂದರು.
ಹೆಣ್ಣು ಮಕ್ಕಳ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಆರೋಗ್ಯ ರಕ್ಷಣೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಕಾರ ್ಯಕ್ರಮದ ಉದ್ದೇಶವಾಗಿದೆ. ಪ್ರಧಾನ ಮಂತ್ರಿಗಳು ಹೆಣ್ಣು ಮಗು ಘನತೆ, ಅವಕಾಶ ಮತ್ತು ಭರವಸೆಯ ಜೀವನ ನಡೆಸುವಂತೆ ನೋಡಿಕೊಳ್ಳುವ ಸರ್ಕಾರದ ಅಚಲ ಸಂಕಲ್ಪವನ್ನು ಪುನರುಚ್ಚರಿಸಲಾಗಿದೆ ಎಂದು ಹೇಳಿರುವುದಾಗಿ ತಿಳಿಸಿದರು.
ಕಾರ ್ಯಕ್ರಮದಲ್ಲಿಕಾಲೇಜಿನ ಪ್ರಾಂಶುಪಾಲ ಬಸವಗೌಡ ಬಿಇಒ ಮಹದೇವ, ಮಹಿಳಾ ಸಬಲೀಕರಣ ಘಟಕದ ಸಿಬ್ಬಂದಿಗಳು, ಕಾಲೇಜಿನ ಉಪನ್ಯಾಸಕರು, ಮುಖ್ಯೋಪಾಧ್ಯಾಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಫೋಟೋ ಶೀರ್ಷಿಕೆಗಳು...
ಎಸ್ ಎಂಡಿವೈ-ಎಸ್ -31-2
ಮಂಡ್ಯ ನಗರದ ಅರಕೇಶ್ವರನಗರ ಬಡಾವಣೆಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿನಡೆದ ‘ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ ್ಯಕ್ರಮವನ್ನು ಜಿ.ಪಂ ಸಿಇಒ ಕೆ.ಆರ್ .ನಂದಿನಿ ಉದ್ಘಾಟಿಸಿದರು.

