ವಿಕ ಸುದ್ದಿಲೋಕ ರಾಯಬಾಗ
ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದರಿಂದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸಿರೊಟ್ಟಿ ಹೇಳಿದರು.
ಪಟ್ಟಣದ ನ್ಯಾಯಾಲಯದ ಆವರಣದಲ್ಲಿತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸ್ವಚ್ಛತಾ ದಿನ ಕಾಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹೆಚ್ಚುವರಿ ದಿವಾಣಿ ನ್ಯಾಯಾಧೀಶ ದಾನಪ್ಪ, ವಕೀಲರ ಸಂಘದ ಅಧ್ಯಕ್ಷ ಕೆ.ಆರ್ .ಕೋಟಿವಾಲೆ, ಎಸ್ .ಎಂ. ಸಲಗರೆ, ಎಂ.ಎಂ. ಪಾಟೀಲ ಹಾಗೂ ನ್ಯಾಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.
-31ರಾಯಬಾಗ2
ರಾಯಬಾಗ ನ್ಯಾಯಾಲಯದ ಆವರಣದಲ್ಲಿರಾಷ್ಟ್ರೀಯ ಸ್ವಚ್ಛತಾ ದಿನ ಕಾರ್ಯಕ್ರಮಕ್ಕೆ ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸಿರೊಟ್ಟಿ ಚಾಲನೆ ನೀಡಿದರು.

