ಕುಂದಾಪುರ: ಇಲ್ಲಿನ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿಅಂತಿಮ ವ ಷÜರ್ ದ ಪದವಿ ವಿದ್ಯಾರ್ಥಿಗಳಿಗೆ ಮ್ಯಾಜಿಕ್ ಬಸ್ ಫೌಂಡೇಶನ್ ಸಹಯೋಗದೊಂದಿಗೆ ಐದು ದಿನಗಳ ಸಾಪ್ಟ್ ಸ್ಕಿಲ್ಸ್ ತರಬೇತಿ ಕಾರ್ಯಾಗಾರ ಜರುಗಿತು.
ಮ್ಯಾಜಿಕ್ ಬಸ್ ಫೌಂಡೇಶನ್ ನ ಕಾರ್ಯಕ್ರಮ ವ್ಯವಸ್ಥಾಪಕ ರಮೇಶ್ ಎನ್ . ಜಾದವ್ ಉದ್ಘಾಟಿಸಿ ಮಾತನಾಡಿ ಐದು ದಿನಗಳ ಕಾಲ ನಡೆಯುವ ಕಾರ್ಯಾಗಾರದ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಿನ್ಸಿಪಾಲ್ ಡಾ.ಕೆ.ಉಮೇಶ್ ಶೆಟ್ಟಿ ಮಾತನಾಡಿ ಕಳೆದ ಮೂರು ವ ಷ ರ್ ಗಳಿಂದ ಸಾಪ್ಟ್ ಸ್ಕಿಲ್ಸ್ ತರಬೇತಿ ಕಾರ್ಯಾಗಾರ ವಿದ್ಯಾರ್ಥಿಗಳು ಉದ್ಯೋಗ ಪಡೆಯಲು ಅಗತ್ಯವಿರುವ ಕೌಶಲ್ಯಗಳನ್ನು ಈ ತರಬೇತಿ ಕಾರ್ಯಾಗಾರಗಳ ಮೂಲಕ ಪಡೆದುಕೊಳ್ಳಬೇಕು ಎಂದರು.ಮ್ಯಾಜಿಕ್ ಬಸ್ ಫೌಂಡೇಶನ್ ಕಾರ್ಯಕ್ರಮ ವ್ಯವಸ್ಥಾಪಕ ಡಾ.ಹರೀಶ್ ಶೆಟ್ಟಿ ಉಪಸ್ಥಿತರಿದ್ದರು. ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿ ತಿಮ್ಮಪ್ಪ ಡಿ.ಎಸ್ .ಸ್ವಾಗತಿಸಿದರು. ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರಣಮ್ ಆರ್ .ಬಿ. ಕಾರ್ಯಕ್ರಮ ನಿರ್ವಹಿಸಿದರು. ವೃತ್ತಿ ಮಾರ್ಗದರ್ಶನ ಘಟಕದ ಮುಖ್ಯಾಧಿಕಾರಿ ಗಿರಿರಾಜ್ ಭಟ್ ನೆಂಪು ವಂದಿಸಿದರು.