ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : 25 ವರ್ಷ ಜೈಲು
ವಿಕ ಸುದ್ದಿಲೋಕ ಕಲಬುರಗಿ12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ನಗರದ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೊ) ನ್ಯಾಯಾಲಯವು 25 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ಒಟ್ಟು 45,000 ರೂ.ದಂಡ ವಿಧಿಸಿದೆ.
ನಗರದ ಬಾಡಿಗೆ ಮನೆಯೊಂದರಲ್ಲಿವಾಸವಿದ್ದ ಮೇಸ್ತ್ರಿ ಕೆಲಸ ಮಾಡುತ್ತಿದ್ದ ನಾಗೇಶ ಅಲಿಯಾಸ್ ಬಾಬು (30) ಶಿಕ್ಷೆಗೆ ಒಳಗಾದ ಅಪರಾಧಿ. ನಗರದ 12 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಸಾಬೀತಾಗಿದೆ. ವಿಚಾರಣೆ ನಡೆಸಿದ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶ ಎಸ್ .ಎಲ….ಚವ್ಹಾಣ್ ಅಪರಾಧಿಗೆ ವಿವಿಧ ಕಾಯಿದೆಗಳ ಅಡಿ 25 ವರ್ಷ ಜೈಲು ಶಿಕ್ಷೆ ಮತ್ತು ಒಟ್ಟು 45,000 ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ. ಇದರೊಂದಿಗೆ ನೊಂದ ಅಪ್ರಾಪ್ತೆಗೆ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಒಟ್ಟು 5,00,000 ರೂ. ಪರಿಹಾರ ತಿಂಗಳೊಳಗೆ ನೀಡುವಂತೆ ತಿಳಿಸಿದ್ದಾರೆ. ಸರಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ಶಾಂತವೀರ ಬಿ.ತುಪ್ಪದ ಪ್ರಬಲ ವಾದ ಮಂಡಿಸಿದ್ದರು. ಚೌಕ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರಾಘವೇಂದ್ರ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
**ಘಟನೆ ಹಿನ್ನೆಲೆ: ಅಪ್ರಾಪ್ತೆಯನ್ನು ಮೊದಲಿಗೆ ಪ್ರೀತಿಸುವುದಾಗಿ ನಂಬಿಸಿ, ಹೆದರಿಸಿ ತನ್ನ ಕೋಣೆಗೆ ಕರೆಯಿಸಿಕೊಂಡು 2025ರ ಮಾರ್ಚ್ ಮತ್ತು ಏಪ್ರಿಲ್ ಅವಧಿಯಲ್ಲಿಮೂರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಅಲ್ಲದೆ ಈ ವಿಷಯ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದ.
**
ಬಾಕ್ಸ್ ...
ಬ್ಲ್ಯಾಕ್ ಮೇಲ… ಮಾಡಿದವನಿಗೆ 3 ವರ್ಷ ಜೈಲು
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿ ಬ್ಲ್ಯಾಕ್ ಮೇಲ… ತಂತ್ರ ಉಪಯೋಗಿಸಿ ಜೀವ ಬೆದರಿಕೆ ಹಾಕಿದ್ದ ಅಪರಾಧಿಗೆ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೊ) ನ್ಯಾಯಾಲಯವು 3 ವರ್ಷ ಜೈಲು ಶಿಕ್ಷೆ, 55 ಸಾವಿರ ರೂ. ದಂಡ ವಿಧಿಸಿದೆ.
ನಗರದ ಗೌಂಡಿ ಕೆಲಸ ಮಾಡುವ ಶಿವರಾಜ ಅಲಿಯಾಸ್ ಸುರಜ್ಯಾ (20) ಶಿಕ್ಷೆಗೊಳಗಾದ ಅಪರಾಧಿ. ಅಪ್ರಾಪ್ತೆ ಮತ್ತೊಬ್ಬ ವ್ಯಕ್ತಿಯೊಂದಿಗೆ ಮಾತನಾಡುತ್ತಿದ್ದ ವಿಷಯ ಪ್ರಸ್ತಾಪಿಸಿ, ಆಕೆಯ ತಂದೆ-ತಾಯಿಗೆ ತಿಳಿಸುವುದಾಗಿ ಹೆದರಿಸಿ ಬ್ಲ್ಯಾಕ್ ಮೇಲ… ಮಾಡಿದ್ದ. ಇದೇ ನೆಪದಲ್ಲಿ2025ರ ಏ.6ರಂದು ಮಧ್ಯಾಹ್ನ ಬಾಲಕಿಯನ್ನು ತನ್ನ ಮನೆಗೆ ಕರೆಸಿಕೊಂಡು ಆಕೆಯ ಖಾಸಗಿ ಅಂಗಗಳನ್ನು ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಅಲ್ಲದೆ ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದ. ವಿಚಾರಣೆ ನಡೆಸಿದ ನ್ಯಾಯಾಧೀಶ ಎಸ್ .ಎಲ….ಚವ್ಹಾಣ ಅವರು ವಿವಿಧ ಕಲಂಗಳಡಿ ತೀರ್ಪು ನೀಡಿದ್ದಾರೆ.