ಬಿ. ಎಂ. ಗಿರಿರಾಜ ಹೇಳಿದ ಕಲ್ಯಾಣಿ ಕಥೆ

Contributed byKiran Mr. Kumar|Vijaya Karnataka
b m girirajs kalyani film a revelation of cultural identities
ನಿರ್ದೇಶಕ ಬಿ. ಎಂ. ಗಿರಿರಾಜ ಅವರು ‘ಕಲ್ಯಾಣಿ’ ಎಂಬ ವಿಭಿನ್ನ ಕಥಾಹಂದರವನ್ನು ತೆರೆಮೇಲೆ ತರುವ ತಯಾರಿಯಲ್ಲಿದ್ದಾರೆ.

ಲೇಖಕ ಬಸವ ರೆಡ್ಡಿ ಅವರ ಕಥೆಗೆ ಬಿ. ಎಂ. ಗಿರಿರಾಜ ಸಿನಿಮಾ ರೂಪ ಕೊಟ್ಟು ಅದನ್ನು ‘ಕಲ್ಯಾಣಿ’ ಹೆಸರಿನಲ್ಲಿತೆರೆಗೆ ತರುತ್ತಿದ್ದಾರೆ. ಕೆಲ ತಿಂಗಳ ಹಿಂದೆಯೇ ಸದ್ದಿಲ್ಲದೆ ಶುರುವಾಗಿದ್ದ ಈ ಚಿತ್ರ, ಸದ್ಯ ಚಿತ್ರೀಕರಣವನ್ನು ಮುಗಿಸಿ ಪೋಸ್ವ್ ಪ್ರೊಡಕ್ಷನ್ ನಲ್ಲಿನಿರತವಾಗಿದೆ.
ನಿರ್ದೇಶಕ ಬಿ. ಎಂ. ಗಿರಿರಾಜ್ ‘ನವಿರಾದ ಒಲವಿನ ಕಥೆಯನ್ನು ಮುನ್ನಲೆಯಾಗಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಇದರಲ್ಲಿನಂಬಿಕೆ, ಸ್ನೇಹ, ಐಡೆಂಟಿಟಿಯ ವಿಷಯಗಳು ಇವೆ. ಉತ್ತರ ಭಾರತದ ಹುಡುಗಿ ಹಾಗೂ ದಕ್ಷಿಣ ಭಾರತದ ಹುಡುಗನ ಪಾತ್ರಗಳನ್ನು ಪ್ರಧಾನವಾಗಿ ಇಟ್ಟುಕೊಂಡು ಎರಡು ಸಂಸ್ಕೃತಿಗಳ ಅನಾವರಣವನ್ನು ಈ ಚಿತ್ರದಲ್ಲಿಮಾಡಿದ್ದೇವೆ’ ಎಂದಿದ್ದಾರೆ.

ಯುವ ನಟ ಸಾಮ್ರಾಟ್ ಶೆಟ್ಟಿ ಈ ಚಿತ್ರದ ನಾಯಕ. ಉಳಿದಂತೆ ಉತ್ತರ ಭಾರತದ ನಟಿ ಸಿಮ್ರನ್ , ರಾಹುಲ್ ಜೇಟ್ಲಿ, ಶಮಂತ್ ರಾವ್ , ಪಿ. ಡಿ. ಸತೀಶ್ ಚಂದ್ರ, ಯಮುನಾ ಶ್ರೀನಿಧಿ, ವಿಜಯ್ ಚೆಂಡೂರು, ಶೈಲೇಂದ್ರ, ರಂಗು ಸಮರ್ಪಣ್ ಸೇರಿದಂತೆ ಅನೇಕ ರಂಗಭೂಮಿ ಕಲಾವಿದರು ಪ್ರಮುಖ ಪಾತ್ರಗಳಲ್ಲಿಅಭಿನಯಿಸುತ್ತಿದ್ದಾರೆ. ‘ಕಲ್ಯಾಣಿ’ ಚಿತ್ರಕ್ಕೆ ಬಿ. ಜೆ. ಭರತ್ ಸಂಗೀತ, ಪ್ರಶಾಂತ ಲಾಗರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ ಕಾರ್ಯವಿದೆ. ಭಟ್ಕಳ, ಬೆಂಗಳೂರು ಸುತ್ತಮುತ್ತ ಚಿತ್ರದ ಬಹುತೇಕ ಚಿತ್ರೀಕರಣ ಮಾಡಲಾಗಿದೆ.