Interim Order Imposed For Cpf Exam Police Commissioner Directive
ಸಿಎಪಿಎಫ್ ಪರೀಕ್ಷೆ: ನಿಷೇಧಾಜ್ಞೆ ಜಾರಿ
Contributed by: Girish J.R|Vijaya Karnataka•
ವಿಕ ಸುದ್ದಿಲೋಕ ಬೆಂಗಳೂರು
ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ ಸಿ) ಕೇಂದ್ರೀಯ ಸಶಸ್ತ್ರ ಮೀಸಲು ಪೊಲೀಸ್ ಪಡೆಯ (ಸಿಎಪಿಎಫ್ ) ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಭಾನುವಾರ (ಜು.19) ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.ಸುಸೂತ್ರವಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸುವ ಉದ್ದೇಶಕ್ಕೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಅಕ್ಕಪಕ್ಕದ ಜೆರಾಕ್ಸ್ ಅಂಗಡಿಗಳು ಮತ್ತು ಸೈಬರ್ ಸೆಂಟರ್ ಗಳನ್ನು ಕಡ್ಡಾಯವಾಗಿ ಮುಚ್ಚಬೇಕು ಎಂದು ಆಯುಕ್ತರು ಆದೇಶದಲ್ಲಿತಿಳಿಸಿದ್ದಾರೆ.