ಸಂಪರ್ಕ ಕಲ್ಪಿಸಲು ಆಗ್ರಹ (ಹೆಡ್ ) ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ (ಬಾಕ್ಸ್ )
ವಿಕ ಸುದ್ದಿಲೋಕ ಗದಗ
ಗದಗ-ಬೆಟಗೇರಿ ನಗರದ ಸ್ಲಂ ಪ್ರದೇಶಗಳ ನಿವಾಸಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಲ್ಲಿಹೆಸ್ಕಾಂ ಅಧಿಕಾರಿಗಳು ನಿರ್ಲಕ್ಷ ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿ, ಸ್ಲಂ ಜನಾಂದೋಲನ-ಕರ್ನಾಟಕ ಹಾಗೂ ಗದಗ ಜಿಲ್ಲಾಸ್ಲಂ ಸಮಿತಿ ನೇತೃತ್ವದಲ್ಲಿಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಈ ವೇಳೆ ಜಿಲ್ಲಾಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಆರ್ .ಮಾನ್ವಿ ಮಾತನಾಡಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನೀಡಿರುವ ನಿರಾಕ್ಷೇಪಣಾ ಪತ್ರ (ಎನ್ ಒಸಿ) ಇದ್ದರೂ ಹೊಸ ವಿದ್ಯುತ್ ಸಂಪರ್ಕಕ್ಕೆ ಅನಗತ್ಯ ದಾಖಲೆಗಳನ್ನು ಕೇಳಿ ಸ್ಲಂ ನಿವಾಸಿಗಳನ್ನು ಹೆಸ್ಕಾಂ ಕಚೇರಿಗೆ ಅಲೆದಾಡುವಂತೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಗದಗ-ಬೆಟಗೇರಿಯಲ್ಲಿ48 ಅಧಿಕೃತ ಹಾಗೂ 70ಕ್ಕೂ ಹೆಚ್ಚು ಅಘೋಷಿತ ಸ್ಲಂ ಪ್ರದೇಶಗಳಿದ್ದು, ಸಾವಿರಾರು ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. ಬಡವರ ಬಾಕಿ ಬಿಲ್ ಗೆ ತಕ್ಷಣ ಸಂಪರ್ಕ ಕಡಿತಗೊಳಿಸುವ ಇಲಾಖೆ, ದೊಡ್ಡ ಬಾಕಿದಾರರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲಎಂದು ಟೀಕಿಸಿದರು.
ಹೊಸ ಸಂಪರ್ಕಗಳಿಗೆ ಸ್ಮಾರ್ಟ್ ಪ್ರೀಪೇಯ್ಡ್ ಮೀಟರ್ ಅಳವಡಿಸುವ ಕ್ರಮವನ್ನೂ ಪ್ರತಿಭಟನಾಕಾರರು ವಿರೋಧಿಸಿದರು. ಸ್ಲಂ ನಿವಾಸಿಗಳಿಗೆ ಯಾವುದೇ ತೊಂದರೆಯಾಗದಂತೆ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಇಲ್ಲದಿದ್ದರೆ ಸಾವಿರಾರು ನಿವಾಸಿಗಳೊಂದಿಗೆ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಮನವಿ ಸ್ವೀಕರಿಸಿದ ಹೆಸ್ಕಾಂ ಅಧಿಕಾರಿಗಳು, ಸ್ಲಂ ಪ್ರದೇಶದ ಅರ್ಹ ಕುಟುಂಬಗಳಿಗೆ ಅಗತ್ಯ ಕ್ರಮ ಕೈಗೊಂಡು ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಪ್ರತಿಭಟನೆಯಲ್ಲಿಪರವೀನ್ ಬಾನು ಹವಾಲ್ದಾರ, ಮೌಲಾಸಾಬ ಗಚ್ಚಿ, ಶರಣಪ್ಪ ಸೂಡಿ, ಇಬ್ರಾಹಿಂ ಮುಲ್ಲಾ, ಮೆಹಬೂಬಸಾಬ ಬಳ್ಳಾರಿ, ಮಲ್ಲೇಶ ಕಿರೇಶೂರ ಸೇರಿದಂತೆ ವಿವಿಧ ಸ್ಲಂ ಪ್ರದೇಶಗಳ ನೂರಾರು ನಿವಾಸಿಗಳು ಭಾಗವಹಿಸಿದ್ದರು.
ಫೋಟೊ: 22 ಜಿಡಿಜಿ 5:
ಸ್ಲಂ ನಿವಾಸಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಆಗ್ರಹಿಸಿ ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.