ವಿಕ ಸುದ್ದಿಲೋಕ ಕೊಪ್ಪಳವಿಜಯನಗರ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ರೈತರು ಮತ್ತು ಜನಪ್ರತಿನಿಧಿಗಳ ನಿಯೋಗ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ವಿಜಯನಗರ ಎಡದಂಡೆ 11-ಎ ಉಪ ಕಾಲುವೆವರೆಗೆ 1.5ಟಿಎಂಸಿ ನೀರು ಬಿಡುಗಡೆ ಮಾಡಬೇಕು. ನೀರು ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಯಿತು.