ವಿಕ ಸುದ್ದಿಲೋಕ ಶಿವಮೊಗ್ಗಭದ್ರಾವತಿ ತಾಲೂಕಿನ ಸನ್ಯಾಸಿ ಕೋಡಮಗ್ಗಿ ಸರಕಾರಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ, ಗುರುವಂದನೆ ಮತ್ತು ಸ್ನೇಹÜಮಿಲನ ಕಾರ್ಯಕ್ರಮವನ್ನು ಜು.26ರ ಬೆಳಗ್ಗೆ 9 ಗಂಟೆಗೆ ಶಾಲೆಯ ಆವರಣದಲ್ಲಿಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಈ.ಪ್ರಶಾಂತ್ ತಿಳಿಸಿದರು.
ಪತ್ರಿಕಾಭವನದಲ್ಲಿಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ನಮ್ಮ ಶಾಲೆಯಲ್ಲಿಶಿಕ್ಷಣ ಪಡೆದ ಹಲವು ವಿದ್ಯಾರ್ಥಿಗಳು ಶಿಕ್ಷಕರು, ವೈದ್ಯರು, ಎಂಜಿನಿಯರ್ , ಉದ್ಯಮಿ ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿತಮ್ಮ ಜೀವನ ರೂಪಿಸಿಕೊಂಡಿದ್ದಾರೆ. ಶಿಕ್ಷಕರು ನಮಗೆ ಜ್ಞಾನ ಹಾಗೂ ಮಾರ್ಗದರ್ಶನ ನೀಡುವ ಮೂಲಕ ನಮ್ಮ ಭವಿಷ್ಯ ರೂಪಿಸಿದ್ದಾರೆ. ಅವರನ್ನು ಗೌರವಿಸುವ ಉದ್ದೇಶದಿಂದ ಗುರುವಂದನೆ ಹಮ್ಮಿಕೊಳ್ಳಲಾಗಿದೆ. ಶಾಲೆಯ ಹಳೆ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಮನವಿ ಮಾಡಿದರು.