ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹೊಸದಿಲ್ಲಿಯಲ್ಲಿಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾಜ್ ರ್ ಖಂಡಿಸಿ ನಗರದಲ್ಲೂಮಂಡ್ಯ ಜಿಲ್ಲಾಯುವ ಕಾಂಗ್ರೆಸ್ ನೇತೃತ್ವದಲ್ಲಿಕಾಲೇಜು ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು.
ನಗರದ ಮಿಮ್ಸ್ ಆವರಣದಿಂದ ಜೆ.ಸಿ.ವೃತ್ತದವರೆಗೆ ಶಾಸಕ ಪಿ.ರವಿಕುಮಾರ್ ಗೌಡ ಗಣಿಗ ಅವರ ನೇತೃತ್ವದಲ್ಲಿಪ್ರತಿಭಟನಾ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು, ಕೇಂದ್ರ ಸರಕಾರದ ವಿರುದ್ಧ ಘೋಷಣೆ ಮೊಳಗಿಸಿದರು. ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ನೀಟ್ ಹಗರಣ, ಪ್ರಶ್ನೆ ಪತ್ರಿಕೆ ಸೋರಿಕೆ, ಶಿಕ್ಷಣ ವ್ಯವಸ್ಥೆ ಅವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಧ್ವನಿ ಎತ್ತುವವರ ಮೇಲೆಯೇ ಲಾಠಿ ಚಾಜ್ ರ್ ನಡೆಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ , ಕಾರಾರ ಯಧ್ಯಕ್ಷ ಎಂ.ಎಸ್ .ಚಿದಂಬರ್ , ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶೈಲೇಂದ್ರ, ಸೇರಿದಂತೆ ಪಕ್ಷದ ಹಲವು ಮಂದಿ ಪದಾಧಿ ಕಾರಿಗಳು, ಮಹಿಳಾ ಕಾರ ್ಯಕರ್ತೆಯರು, ನಾನಾ ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.
ಶಾಸಕರ ನೇತೃತ್ವ
ಶಾಸಕ ಪಿ.ರವಿಕುಮಾರ್ ಗೌಡ ಗಣಿಗ ಅವರೇ ವಿದ್ಯಾರ್ಥಿಗಳ ಪ್ರತಿಭಟನೆಯ ನೇತೃತ್ವ ವಹಿಸಿ ಗಮನ ಸೆಳೆದರು. ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಹತ್ತಿಕ್ಕುವ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಒಪ್ಪುವುದಿಲ್ಲ. ಕೇಂದ್ರ ಸರಕಾರಕ್ಕೆ ವಿದ್ಯಾರ್ಥಿಗಳ ಮೇಲೆ ಕನಿಕರವಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರೇ ಶೋಕಿ ಮಾಡುವುದನ್ನು ಬಿಟ್ಟು ವಿದ್ಯಾರ್ಥಿಗಳ ಉಳಿಸಲಿ ಎಂದು ಆಗ್ರಹಿಸಿದರು.
ದೆಹಲಿಯಲ್ಲಿಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾಜ್ ರ್ ಆಗಿದೆ. ಬಿಜೆಪಿಯವರು ಕೋಟ್ಯಂತರ ದುಡ್ಡು ಹೊಡೆಯಲು ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿದ್ದಾರೆ. ಕೇಂದ್ರ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಅವರು ಅಸಮರ್ಥರು, ಇಂತಹ ಮಂತ್ರಿ ದೇಶಕ್ಕೆ ಬೇಕಾ? ಎಂದು ಪ್ರಶ್ನಿಸಿದರು.
ವೋಟ್ ಗಾಗಿ ನೀವು ಪ್ರಧಾನಿ ಮಂತ್ರಿ ಆಗಿದ್ದೀರಾ? ವಿದ್ಯಾರ್ಥಿಗಳ ಪರ ನಿಂತ ರಾಹುಲ್ ಗಾಂಧಿ ಅವರನ್ನು ಬಂಧಿಸಲಾಗಿದೆ. ಕೇಂದ್ರ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಬೆಂ-ಮೈ ಹೆದ್ದಾರಿಯಲ್ಲಿವಿದ್ಯಾರ್ಥಿಗಳ ನಿಲ್ಲಿಸಿ ಬೃಹತ್ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಗೆ ವಿದ್ಯಾರ್ಥಿಗಳ ದುರ್ಬಳಕೆ ಆರೋಪ
ಕಾಲೇಜು ತರಗತಿ ಅವಧಿಯಲ್ಲಿವಿದ್ಯಾರ್ಥಿಗಳನ್ನು ಯಾವುದೇ ಸಭೆ-ಸಮಾರಂಭ, ಪ್ರತಿಭಟನೆಗೆ ಬಳಸಿಕೊಳ್ಳುವಂತಿಲ್ಲವೆಂದು ಶಿಕ್ಷಣ ಇಲಾಖೆಯ ಆದೇಶವಿದ್ದರೂ ಕಾಂಗ್ರೆಸ್ ಪಕ್ಷದವರು ವಿದ್ಯಾರ್ಥಿಗಳನ್ನು ಪ್ರತಿಭಟನೆಗೆ ಕರೆಸಿಕೊಂಡು ದುರ್ಬಳಕೆ ಮಾಡಿಕೊಂಡಿದ್ದಾರೆಂಬ ಆರೋಪವೂ ಕೇಳಿ ಬಂದವು.
ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳ ಮೇಲೆ ಒತ್ತಡ ಹೇರಿ, ಅವರ ಮೂಲಕ ವಿದ್ಯಾರ್ಥಿಗಳನ್ನು ಪ್ರತಿಭಟನೆಗೆ ಕರೆಸಿಕೊಳ್ಳಲಾಗಿದೆ. ಆ ಮೂಲಕ ಜನಪ್ರತಿನಿಧಿ ಗಳು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು ತರಗತಿಗಳನ್ನು ತೊರೆದು ಪ್ರತಿಭಟನೆ ನಡೆಸಿದ್ದು ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.
ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದೆಯಾದಲ್ಲಿಸ್ವಯಂಪ್ರೇರಿತರಾಗಿ, ಇಲ್ಲವೇ ಎಸ್ ಎಫ್ ಐ, ಎಬಿವಿಪಿ ನೇತೃತ್ವದಲ್ಲಿನಡೆಸಬೇಕು. ಆದರೆ, ಇಂದು ಒಂದು ಪಕ್ಷದ ಬ್ಯಾನರ್ ನಡಿ ವಿದ್ಯಾರ್ಥಿಗಳನ್ನು ಪ್ರತಿಭಟನೆಗೆ ದುರ್ಬಳಕೆ ಮಾಡಿಕೊಂಡಿದ್ದು ತಪ್ಪು ಎಂಬುದು ಸಾರ್ವಜನಿಕರ ಆಕ್ಷೇಪವಾಗಿದೆ.
ಎಂಡಿವೈ22ಎನ್ 12 ಮತ್ತು 13
ಮಂಡ್ಯದಲ್ಲಿಜಿಲ್ಲಾಯುವ ಕಾಂಗ್ರೆಸ್ ನೇತೃತ್ವದಲ್ಲಿನೇತೃತ್ವದಲ್ಲಿಬುಧವಾರ ನಡೆದ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿಶಾಸಕ ಪಿ.ರವಿಕುಮಾರ್ ಗೌಡ ಗಣಿಗ ಮಾತನಾಡಿದರು.