*ರಾಜ್ಯದ ನಾನಾ ಆಸ್ಪತ್ರೆಗಳ ನುರಿತ ತಜ್ಞ ವೈದ್ಯರಿಂದ ತಪಾಸಣೆ: ಶಾಸಕ ಪಿ.ರವಿಕುಮಾರ್ ಗೌಡ ಗಣಿಗ ಮಾಹಿತಿವಿಕ ಸುದ್ದಿಲೋಕ ಮಂಡ್ಯ
ಗ್ರಾಮೀಣ ಜನರಿಗೆ ತಜ್ಞ ವೈದ್ಯರ ಸೇವೆಯನ್ನು ಒಂದೇ ವೇದಿಕೆಯಲ್ಲಿಉಚಿತವಾಗಿ ಒದಗಿಸುವ ಉದ್ದೇಶದಿಂದ ಜು.27ರಂದು ಮಂಡ್ಯ ತಾಲೂಕು ಕೆರಗೋಡು ಗ್ರಾಮದಲ್ಲಿಬೃಹತ್ ಆರೋಗ್ಯ ಮೇಳ ಆಯೋಜಿಸಲಾಗಿದೆ ಎಂದು ಶಾಸಕ ಪಿ.ರವಿಕುಮಾರ್ ಗೌಡ ಗಣಿಗ ತಿಳಿಸಿರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಆರೋಗ್ಯ ಮೇಳ ಸಂಬಂಧ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘‘ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಶ್ರೀನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿಶಿಬಿರ ನಡೆಯಲಿದೆ’’ ಎಂದು ಹೇಳಿದರು.
‘‘ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳು, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಾನಾ ಆರೋಗ್ಯ ಸಂಸ್ಥೆಗಳ ಸಹಯೋಗದಲ್ಲಿಅಂದು ಬೆಳಗ್ಗೆ 8ರಿಂದ ಸಂಜೆ 6 ರವರೆಗೆ ಮೇಳ ನಡೆಯಲಿದೆ. ಜಿಲ್ಲೆಯ ಹಾಗೂ ರಾಜ್ಯದ ನಾನಾ ಆಸ್ಪತ್ರೆಗಳ ನುರಿತ ತಜ್ಞ ವೈದ್ಯರು ಭಾಗವಹಿಸಿ ಸಾರ್ವಜನಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿ ವೈದ್ಯಕೀಯ ಸಲಹೆ ಹಾಗೂ ಅಗತ್ಯ ಚಿಕಿತ್ಸೆಗೆ ಮಾರ್ಗದರ್ಶನ ನೀಡಲಿದ್ದಾರೆ’’ ಎಂದರು.
‘‘ಆರೋಗ್ಯ ಮೇಳದಲ್ಲಿಗರ್ಭಕೋಶ ಕ್ಯಾನ್ಸರ್ , ಸ್ತನ ಕ್ಯಾನ್ಸರ್ , ಕಿಡ್ನಿ ಕ್ಯಾನ್ಸರ್ , ಮೂಳೆ ಕ್ಯಾನ್ಸರ್ ಸೇರಿದಂತೆ ನಾನಾ ಕ್ಯಾನ್ಸರ್ ಗಳ ಪ್ರಾಥಮಿಕ ತಪಾಸಣೆ, ಹೃದಯ ಸಂಬಂಧಿ ಕಾಯಿಲೆಗಳು, ಮಧುಮೇಹ, ರಕ್ತದೊತ್ತಡ, ಕಣ್ಣುಗಳ ತಪಾಸಣೆ, ದಂತ ಚಿಕಿತ್ಸಾ ಸೇವೆಗಳು, ಸಾಮಾನ್ಯ ಆರೋಗ್ಯ ತಪಾಸಣೆ ಸೇರಿದಂತೆ ಹಲವು ವಿಶೇಷ ವೈದ್ಯಕೀಯ ಸೇವೆಗಳು ಉಚಿತವಾಗಿ ಲಭ್ಯವಾಗಲಿವೆ. ಗಂಭೀರ ಆರೋಗ್ಯ ಸಮಸ್ಯೆಗಳು ಪತ್ತೆಯಾದವರಿಗೆ ಹೆಚ್ಚಿನ ಚಿಕಿತ್ಸೆಗೆ ತಜ್ಞ ಆಸ್ಪತ್ರೆಗಳಿಗೆ ರೆಫರ್ ಮಾಡುವ ವ್ಯವಸ್ಥೆಯೂ ಕಲ್ಪಿಸಲಾಗಿದ್ದು, ಅಗತ್ಯವಿರುವವರಿಗೆ ಔಷಧ ವಿತರಣೆ ಹಾಗೂ ಆರೋಗ್ಯ ಜಾಗೃತಿ ಕುರಿತು ಸಲಹೆಗಳನ್ನು ನೀಡಲಾಗುವುದು’’ ಎಂದು ಹೇಳಿದರು.
ಪೂರ್ವಭಾವಿ ಸಭೆಯಲ್ಲಿಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಮಂಡ್ಯ ಉಪ ವಿಭಾಗಾಧಿಕಾರಿ ಶಿವಮೂರ್ತಿ, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ತಹಸೀಲ್ದಾರ್ ವಿಶ್ವನಾಥ್ ಸೇರಿದಂತೆ ನಾನಾ ಇಲಾಖೆಗಳ ಹಿರಿಯ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿ ಕಾರಿಗಳು ಹಾಗೂ ಕಾರ ್ಯಕ್ರಮ ಸಂಘಟಕರು ಭಾಗವಹಿಸಿದ್ದರು.
ಗ್ರಾಮೀಣ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ತಲುಪಿಸುವ ಉದ್ದೇಶದಿಂದ ಈ ಬೃಹತ್ ಆರೋಗ್ಯ ಮೇಳವನ್ನು ಆಯೋಜಿಸಲಾಗಿದೆ. ಸಣ್ಣ ಆರೋಗ್ಯ ಸಮಸ್ಯೆಗಳನ್ನೂ ನಿರ್ಲಕ್ಷಿಸದೆ ಪ್ರತಿಯೊಬ್ಬರೂ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉಚಿತ ತಪಾಸಣೆ ಮಾಡಿಸಿಕೊಳ್ಳಬೇಕು. ಎಲ್ಲಇಲಾಖೆಗಳು ಸಮನ್ವಯದಿಂದ ಕಾರ ್ಯನಿರ್ವಹಿಸಿ ಮೇಳವನ್ನು ಯಶಸ್ವಿಗೊಳಿಸಬೇಕು.