ನೀಟ್ ಪರೀಕ್ಷೆಯಲ್ಲಿನಡೆದಿರುವ ಅಕ್ರಮಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಒಂದು ಒತ್ತಾಯಿಸಿ ಯುವ ಕಾಂಗ್ರೆಸ್ ವತಿಯಿಂದ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.ನಗರದ ಸರಕಾರಿ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ತನ್ವೀರ್ ಹಾಗೂ ಮಾಸ್ತಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ದೊಡ್ಡಿ ವಸಂತ್ ಅವರ ನೇತೃತ್ವದಲ್ಲಿಜಮಾಯಿಸಿ ತಾಲೂಕು ಕಚೇರಿ ವರೆಗೂ ಜಾಥಾ ಮೂಲಕ ತೆರಳಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ವೇಳೆ ಕೇಂದ್ರ ಸರಕಾರ ಹಾಗೂ ಕೇಂದ್ರ ಶಿಕ್ಷಣ ಸಚಿವರ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ದೇಶಾದ್ಯಂತ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ನೀಡುವ ನೀಟ್ ಪರೀಕ್ಷೆಯಲ್ಲಿಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ನಡೆದಿರುವ ಅಕ್ರಮಗಳು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿತೀವ್ರ ಆತಂಕ ಹಾಗೂ ಅಸಮಾಧಾನ ಮೂಡಿಸಿದೆ. ಪಾರದರ್ಶಕತೆಯ ಕೊರತೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದ್ದು, ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೂ ಪೆಟ್ಟು ಬಿದ್ದಿದೆ ಎಂದು ಆರೋಪಿಸಿದರು.
ಪ್ರಕರಣದ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ಅಕ್ರಮದಲ್ಲಿಭಾಗಿಯಾಗಿರುವ ಎಲ್ಲತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕೇಂದ್ರ ಶಿಕ್ಷಣ ಸಚಿವರನ್ನು ವಜಾಗೊಳಿಸಿ, ಮುಂದಿನ ದಿನಗಳಲ್ಲಿಇಂತಹ ಘಟನೆಗಳು ಮರುಕಳಿಸದಂತೆ ಪರೀಕ್ಷಾ ವ್ಯವಸ್ಥೆಯನ್ನು ಇನ್ನಷ್ಟು ಪಾರದರ್ಶಕ ಹಾಗೂ ಸುರಕ್ಷಿತಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಯುವ ಕಾಂಗ್ರೆಸ್ ಆಗ್ರಹಿಸಿದೆ.
ಈ ಸಂದರ್ಭದಲ್ಲಿಜಿಲ್ಲಾಮಹಿಳಾ ಕಾಂಗ್ರೆಸ್ ಅಧ್ಯಕ್ಷ ಹೇಮಾಮಾಲಿನಿ,ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ತನ್ವೀರ್ , ಮಾಸ್ತಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ದೊಡ್ಡಿ ವಸಂತ್ , ರೋಹಿತ್ ನಾರಾಯಣ್ , ಎಂ.ಸಂಜು ಮೋನಿಷ್ , ಧನ್ಯಸಿರಿ ಫೌಂಡೇಷನ್ ಅಧ್ಯಕ್ಷ ಡಾ. ಪಿ.ಜಿ.ಗಿರಿ, ಇಂದುಮಂಗಲ ಲೋಕೇಶ್ , ಉದಯ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಮೂರ್ತಿ, ಶೈಲಾ, ಮಂಜುಳ, ಸೇರಿದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.
24 ಮಾಲೂರು ಪೋಟೊ 1. ನೀಟ್ ಪರೀಕ್ಷೆಯಲ್ಲಿನಡೆದಿರುವ ಅಕ್ರಮಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಯುವ ಕಾಂಗ್ರೆಸ್ ವತಿಯಿಂದ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.