ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಆಣದೂರು ಗ್ರಾಮದಲ್ಲಿಶನಿವಾರ ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರರೆಡ್ಡಿ ಅವರು ಎಸ್ ಐಆರ್ ಮಹಾಸಂಪರ್ಕ ಅಭಿಯಾನದಲ್ಲಿಪಾಲ್ಗೊಂಡರು.ಮತ ಪಟ್ಟಿಯಿಂದ ಅರ್ಹರು ಹೊರಗುಳಿಯದಿರಲಿ
ವಿಕ ಸುದ್ದಿಲೋಕ ಬೀದರ್
ತಾಲೂಕಿನ ಆಣದೂರ ಗ್ರಾಮದಲ್ಲಿಶನಿವಾರ ನಡೆದ ಎಸ್ ಐಆರ್ ಮಹಾ ಸಂಪರ್ಕ ಅಭಿಯಾನದಲ್ಲಿಪಾಲ್ಗೊಂಡ ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರರೆಡ್ಡಿ, ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಮನೆ ಮನೆಗೆ ಭೇಟಿ ನೀಡಿ, ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷÜ್ಕರಣೆ ಪ್ರಕ್ರಿಯೆ ಪರಿಶೀಲಿಸಿದರು. ಪ್ರಜಾಪ್ರಭುತ್ವದ ಅಡಿಪಾಯವೇ ನಿಖರವಾದ ಮತದಾರರ ಪಟ್ಟಿ. ಎಸ್ ಐಆರ್ ಪ್ರಕ್ರಿಯೆಯನ್ನು ಪ್ರತಿಯೊಬ್ಬ ಕಾರ್ಯಕರ್ತರು ಜವಾಬ್ದಾರಿಯಿಂದ ಕೈಗೆತ್ತಿಕೊಂಡು, ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಹೊರಗುಳಿಯದಂತೆ ಮನೆ ಮನೆಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದರು. ಹೊಸ ಮತದಾರರ ಹೆಸರು ಸೇರ್ಪಡೆ, ಹೆಸರು ಹಾಗೂ ವಿಳಾಸ ತಿದ್ದುಪಡಿ ಸೇರಿ ಅಗತ್ಯ ಪ್ರಕ್ರಿಯೆಗಳ ಕುರಿತು ಸಾರ್ವಜನಿಕರಿಗೆ ಸಮಗ್ರ ಮಾಹಿತಿ ನೀಡಿ, ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಲು ಸಹಕಾರ ನೀಡಬೇಕು ಎಂದರು.
ಬಿಜೆಪಿ ಕಾರ್ಯಕರ್ತರು ಸದಾ ಜನರೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಎಸ್ ಐಆರ್ ಮಹಾಸಂಪರ್ಕ ಅಭಿಯಾನದ ಮೂಲಕ ಪ್ರತಿಯೊಂದು ಮನೆಗೂ ತಲುಪಿ, ಪ್ರತಿಯೊಬ್ಬ ಅರ್ಹ ಮತದಾರರ ಮತದಾನದ ಹಕ್ಕು ಸಂರಕ್ಷಿಸುವ ಕಾರ್ಯವನ್ನು ನಿರ್ವಹಿಸಬೇಕು ಎಂದರು.
ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ , ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಪ್ರಮುಖರಾದ ಬಾಬುರಾವ ಕಾರಬಾರಿ, ಕಿರಣ ಪಾಟೀಲ್ , ಸೂರ್ಯಕಾಂತ ಚಿಲ್ಲಾಬಟ್ಟೆ, ಸುರೇಶ ಮಾಶೆಟ್ಟಿ, ಗುರುನಾಥ್ ರಾಜಗೀರಾ, ಜಗನ್ನಾಥ್ ಪಾಟೀಲ್ , ಗುರುನಾಥ್ ಜ್ಯಾಂತಿಕರ್ , ಸಂತೋಷರೆಡ್ಡಿ, ಚಂದ್ರಯ್ಯಸ್ವಾಮಿ, ಸಂಜು ಕೋಳಿ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಶಕ್ತಿ ಕೇಂದ್ರದ ಪ್ರಮುಖರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.