ಶರಣ ಸಾಹಿತ್ಯ ಕೇಂದ್ರದ ನಿರ್ದೇಶಕರ ನೇಮಕ

Contributed byvenkatesh.narasappa@timesgroup.com|Vijaya Karnataka
new appointment of director at basavadi sharana literary centre prof vijaykumar b malashetty
ಚಿತ್ರ: ಮಲಶೆಟ್ಟಿ

**
ಶರಣ ಸಾಹಿತ್ಯ ಕೇಂದ್ರದ ನಿರ್ದೇಶಕರ ನೇಮಕ

ವಿಕ ಸುದ್ದಿಲೋಕ ಕಲಬುರಗಿ

ಗುಲ್ಬರ್ಗ ವಿಶ್ವವಿದ್ಯಾಲಯದ ಬಸವಾದಿ ಶರಣ ಸಾಹಿತ್ಯ ಕೇಂದ್ರದ ನಿರ್ದೇಶಕರಾಗಿ ಪ್ರೊ.ವಿಜಯಕುಮಾರ ಬಿ.ಮಲಶೆಟ್ಟಿ ಅವರನ್ನು ನೇಮಕ ಮಾಡಿ ವಿಶ್ವವಿದ್ಯಾಲಯದ ಕುಲಸಚಿವರು ಆದೇಶ ಹೊರಡಿಸಿದ್ದಾರೆ.

ಬಸವಾದಿ ಶರಣ ಸಾಹಿತ್ಯ ಕೇಂದ್ರದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಭೌತಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಎಸ್ .ಎಂ.ಹನಗೋಡಿಮಠ 2026ರ ಮೇ 31ರಂದು ವಯೋನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿಈ ಹುದ್ದೆ ತೆರವಾಗಿತ್ತು. ತೆರವಾದ ಸ್ಥಾನಕ್ಕೆ ಹೊಸ ನಿರ್ದೇಶಕರನ್ನು ನೇಮಿಸುವಂತೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಕುಲಪತಿಗಳ ಅನುಮೋದನೆ ಮೇರೆಗೆ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.