29ರಂದು ಪಿಂಚಣಿ ಅದಾಲತ್

Contributed byparashurammkerehalli@gmail.com|Vijaya Karnataka
pension adalat on 29th important information for the public
29ರಂದು ಪಿಂಚಣಿ ಅದಾಲತ್

ರಿಪ್ಪನ್ ಪೇಟೆ: ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಸಾರ್ವಜನಿಕರಿಗೆ ಪಟ್ಟಣದ ನಾಡ ಕಚೇರಿಯಲ್ಲಿಜು.29ರಂದು 11 ಗಂಟೆಗೆ ಪಿಂಚಣಿ ಅದಾಲತ್ ಆಯೋಜಿಸಲಾಗಿದೆ ಎಂದು ಉಪ ತಹಸೀಲ್ದಾರ್ ಗೌತಮ್ ತಿಳಿಸಿದ್ದಾರೆ.
ಸಾಮಾಜಿಕ ಭದ್ರತಾ ಯೋಜನೆಗಳಾದ ವೃದ್ದಾ ಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ವೇತನ, ವಿಶೇಷಚೇತನ ವೇತನ, ಮೈತ್ರಿ, ಮನಸ್ವಿನಿ ಮತ್ತು ರಾಷ್ಟ್ರೀಯ ಕುಟುಂಬ ಪರಿಹಾರ ಯೋಜನೆ ಅನುಷ್ಠಾನಗೊಳಿಸುವ ಉದ್ದೇಶದಿಂದ ಪಿಂಚಣಿ ಅದಾಲತ್ ನಡೆಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆಯಲು ತಿಳಿಸಿದ್ದಾರೆ.