ಚಿಪಗಿ- ಸೋಮನಹಳ್ಳಿ ರಸ್ತೆ ದುರಸ್ತಿಗೆ ಒತ್ತಾಯ

Contributed bykeregaddemurthy@gmail.com|Vijaya Karnataka
demand for repair of sommanahalli road to the district commissioner
ವಿಕ ಸುದ್ದಿಲೋಕ ಶಿರಸಿ

ತಾಲೂಕಿನ ಚಿಪಗಿ-ಸೋಮನಹಳ್ಳಿ ರಸ್ತೆ ಹಲವು ವರ್ಷಗಳಿಂದ ಸಮರ್ಪಕ ನಿರ್ವಹಣೆ ಹಾಗೂ ದುರಸ್ತಿ ಕಾಣದೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಈ ರಸ್ತೆಯ ಹಲವೆಡೆ ದೊಡ್ಡ ಗುಂಡಿಗಳು ನಿರ್ಮಾಣವಾಗಿರುವುದರಿಂದ ದ್ವಿಚಕ್ರ ವಾಹನ ಸವಾರರು ಸೇರಿದಂತೆ ಅಪಾಯದಲ್ಲೇ ಸಂಚರಿಸುವಂತಾಗಿದೆ. ಮಳೆಗಾಲದಲ್ಲಿರಸ್ತೆ ಇನ್ನಷ್ಟು ಅಪಾಯಕಾರಿಯಾಗಿದ್ದು, ಯಾವುದೇ ಕ್ಷಣದಲ್ಲಿದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇರುವುದರಿಂದ ಗ್ರಾಮಸ್ಥರು ತಕ್ಷಣ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಈ ಕುರಿತು ಗ್ರಾಮಸ್ಥರು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಅಧಿಕಾರಿಗಳು ಶೀಘ್ರದಲ್ಲೇ ಸ್ಥಳಕ್ಕೆ ಭೇಟಿ ನೀಡಿ ರಸ್ತೆಯ ಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಯುವ ಮುಖಂಡ ನವೀನ್ ಶೆಟ್ಟಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿರಾಜೀವ್ ಶೆಟ್ಟಿ, ಮೋಹನ್ ಪೂಜಾರಿ, ರಾಜು ಶೆಟ್ಟಿ, ಪರಶುರಾಮ ನಾಯ್ ್ಕ, ರಾಜು ಪೂಜಾರಿ, ಶೀನು ಬಾಕಳೆ ಇತರರು ಇದ್ದರು.

25ಎಸ್ಸಾರೆಸ್ 6ಎ,ಬಿ==

=ಚಿಪಗಿ- ಸೋಮನಹಳ್ಳಿ ರಸ್ತೆ ಸ್ಥಿತಿ

=ಗ್ರಾಮಸ್ಥರು ರಸ್ತೆ ದುಸ್ಥಿತಿಗೆ ಅಸಮಾಧಾನ ವ್ಯಕ್ತಪಡಿಸಿದರು.