ಲಕ್ಷಾಂತರ ಜನರ ಭವಿಷ್ಯದ ಜತೆ ಆಟ ಆಡುವಂತಹದ್ದು ಸರಿಯಲ್ಲ. ಧಮೇಂರ್ ದ್ರ ಪ್ರಧಾನ್ ಗೆ ಮಾತ್ರವಲ್ಲ, ಆ ಅರ್ಹತೆ ಯಾರಿಗೂ ಇಲ್ಲ. ಯುವಕರ ಭವಿಷ್ಯಕ್ಕೆ ಅನುಕೂಲ ಮಾಡಿಕೊಡಬೇಕೆ ವಿನಃ ಭವಿಷ್ಯಕ್ಕೆ ಅಡ್ಡ ಬರಬಾರದು. ಕೇಂದ್ರ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ ಎಂದು ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದರು.ನಗರದಲ್ಲಿಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀಟ್ ಪರೀಕ್ಷೆ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಅತ್ಯಂತ ಮಹತ್ವದ ಪರೀಕ್ಷೆಯಾಗಿದೆ. ಆದರೆ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದಿಂದ ಪರೀಕ್ಷೆಯ ವಿಶ್ವಾಸಾರ್ಹತೆಗೆ ಧಕ್ಕೆ ಉಂಟಾಗಿ, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸಂಬಂಧಪಟ್ಟ ಕೇಂದ್ರ ಸಚಿವರು ರಾಜೀನಾಮೆ ನೀಡಬೇಕು ಎಂದು ವಿದ್ಯಾರ್ಥಿಗಳು ವ್ಯಾಪಕವಾಗಿ ಪ್ರತಿಭಟನೆ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಈ ಪ್ರಕರಣದಲ್ಲಿತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅದರಂತೆ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತಾರಾ ಕಾದು ನೋಡಬೇಕು ಎಂದರು.
ಕೇಂದ್ರ ಶಿಕ್ಷಣ ಸಚಿವ ಧಮೇಂರ್ ದ್ರ ಪ್ರಧಾನ್ ಅವರ ರಾಜೀನಾಮೆ ಸ್ವಾಗತಾರ್ಹವಾಗಿದೆ. ರಾಷ್ಟ್ರೀಯ ವಿಷಯಗಳಲ್ಲಿಸಚಿವರು ತಮ್ಮ ಜವಾಬ್ದಾರಿಯನ್ನು ಹೊರುವ ಹೊಣೆಗಾರಿಕೆಯನ್ನು ಇದು ಮತ್ತಷ್ಟು ಬಲಪಡಿಸಿದೆ. ನೀಟ್ ಪರೀಕ್ಷೆ ಬಹಳ ದೊಡ್ಡದು. ಲಕ್ಷಾಂತರ ಮಕ್ಕಳು ಅವರ ಭವಿಷ್ಯವನ್ನು ನಿರ್ಮಾಣ ಮಾಡಿಕೊಳ್ಳಲು ಬರೆಯುವ ಪರೀಕ್ಷೆ ಇದು. ಅದರಲ್ಲಿಯಾವುದೇ ತಪ್ಪುಗಳು ಆಗಬಾರದು. ಜವಾಬ್ದಾರಿಯನ್ನು ಹೊತ್ತಿರುವವರು ಅದನ್ನು ನೋಡಿಕೊಳ್ಳಬೇಕು. ಹೆಜ್ಜೆ ಹೆಜ್ಜೆಗೂ ಪರಿಶೀಲನೆ ಮಾಡಿ, ಪರೀಕ್ಷೆ ಚೆನ್ನಾಗಿ ಆಗುವಂತೆ ನೋಡಿಕೊಂಡು, ಆ ಮಕ್ಕಳಿಗೆ ಹೆಚ್ಚಿನ ಅಂಕಗಳು ಬರುವ ರೀತಿಯಲ್ಲಿಅವರಿಗೆ ಅವಕಾಶಗಳನ್ನು ಕಲ್ಪಿಸಬೇಕು ಎಂದರು.
ಹೀಗಿರುವಾಗ ಯಾರು ತಪ್ಪು ಮಾಡುತ್ತಾರೋ, ಅದು ಸಣ್ಣ ತಪ್ಪಲ್ಲ. ದೆಹಲಿಯಲ್ಲಿಯುವಕರು ಪ್ರತಿಭಟನೆ ಮಾಡಿ, ಯಾರು ತಪ್ಪಿತಸ್ಥರಿದ್ದಾರೆ ಅವರಿಗೆ ಶಿಕ್ಷೆ ಆಗಬೇಕು ಮತ್ತು ಅವರನ್ನು ಆ ಜವಾಬ್ದಾರಿಯಿಂದ ತೆಗೆಯಬೇಕು ಎಂದು ಹೋರಾಟ ಮಾಡಿದ್ದರು. ಧಮೇಂರ್ ದ್ರ ಪ್ರಧಾನ್ ಅವರು ಜವಾಬ್ದಾರಿ ವಹಿಸಿಕೊಂಡಿದ್ದರು. ಹಾಗಾಗಿ ಅವರು ರಾಜೀನಾಮೆ ನೀಡಬೇಕು ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂಬ ಬೇಡಿಕೆಯನ್ನು ಇಟ್ಟಿದ್ದರು. ರಾಹುಲ್ ಗಾಂಧಿ ಅವರು ಕೂಡ ಆ ಪ್ರತಿಭಟನೆಯಲ್ಲಿಭಾಗವಹಿಸಿದ್ದರು. ಯುವಕರೇ ನಮ್ಮ ದೇಶದ ಭವಿಷ್ಯ. ಧಮೇಂರ್ ದ್ರ ಪ್ರಧಾನ್ ಅವರು ರಾಜೀನಾಮೆ ನೀಡಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಪರಮೇಶ್ವರ್ ಹೇಳಿದರು.