ಕಲಬುರಗಿ : ಪಡಿತರ ಅಕ್ಕಿ ಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯನ್ನು ಪತ್ತೆ ಮಾಡಿ, 7.48 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿಕೊಂಡ ಘಟನೆ ನಗರದ ಎಪಿಎಂಸಿ ಯಾರ್ಡ್ ಬಳಿ ನಡೆದಿದೆ. ಆಹಾರ ಮತ್ತು ನಾಗರಿಕ ಇಲಾಖೆ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿ ಜತೆ ಹೋಗಿ ದಾಳಿ ನಡೆಸಿದ್ದಾರೆ. ಈ ವೇಳೆ ಲಾರಿ ಚಾಲಕ ಓಡಿ ಹೋಗಿದ್ದಾನೆ. ಲಾರಿಯನ್ನು ಪರಿಶೀಲನೆ ನಡೆಸಿದಾಗ ಲಾರಿಯಲ್ಲಿತಲಾ 40 ಕೆ.ಜಿ. ತೂಕದ 550 ಅಕ್ಕಿ ಚೀಲ ಪತ್ತೆಯಾಗಿದ್ದು, ಒಟ್ಟು 7.48 ಲಕ್ಷ ರೂ. ಮೌಲ್ಯದ 220 ಕ್ವಿಂಟಾಲ್ ಪಡಿತರ ಅಕ್ಕಿ ಮತ್ತು 4 ಲಕ್ಷ ರೂ. ಮೌಲ್ಯದ ಲಾರಿಯನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಚೌಕ್ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.