ಕಾರವಾರ ಸಿಇಒ

Contributed byhmanjunat54@gmail.com|Vijaya Karnataka
strict action against poor quality work in karwar zilla panchayat ceo dr dilish shashis warning
ಕಳಪೆ ಕಾಮಗಾರಿ ಕಂಡುಬಂದರೆ ಕಠಿಣ ಕ್ರಮ

ವಿಕ ಸುದ್ದಿಲೋಕ ಕಾರವಾರ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಕೈಗೊಳ್ಳುವ ಕಾಮಗರಿಗಳಲ್ಲಿಕಳಪೆ ಕಂಡು ಬಂದರೆ ಸಂಬಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಪಂ ಸಿಇಒ ಡಾ.ದಿಲೀಷ್ ಶಶಿ ಎಚ್ಚರಿಕೆ ನೀಡಿದರು.

ಜಿ.ಪಂ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘‘ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಮತ್ತು ಎಲ್ಲಕಾಮಗಾರಿಗಳ ವಿವರಗಳನ್ನು ಬಿಂಬಿರುವ ಜಿಪಿಎಸ್ ಸಹಿತ ಫೋಟೊಗಳನ್ನು ಸಲ್ಲಿಸಿದಲ್ಲಿಮಾತ್ರ ಕಾಮಗಾರಿಯ ವೆಚ್ಚದ ಬಿಲ್ಲುಗಳ ಮೊತ್ತವನ್ನು ಬಿಡುಗಡೆಗೊಳಿಸಲಾಗುವುದು’’ ಎಂದರು.

ಜಿಲ್ಲೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಮತ್ತು ದುರಸ್ತಿ ಕುರಿತು ಚರ್ಚೆ ನಡೆಯಿತು.

ಜಿಲ್ಲಾಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಎಸ್ . ಅಲ್ಲಾಬಕ್ಷ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ , ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಕಿರಿಯ ಎಂಜಿನಿಯರ್ ಗಳು ಇದ್ದರು.

ಶಿರ್ಷಿಕೆ

ಜಿ.ಪಂ ಸಭಾಂಗಣದಲ್ಲಿನಡೆದ ಜಿಲ್ಲಾನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯಲ್ಲಿಜಿಪಂ ಸಿಇಒ ಡಾ.ದಿಲೀಷ್ ಶಶಿ ಮಾತನಾಡಿದರು.