ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶ

Contributed bymanivk123@gmail.com|Vijaya Karnataka
beguru police operation seized illegal ration rice
ಬೇಗೂರು(ಗುಂಡ್ಲುಪೇಟೆ): ಸಮೀಪದ ಬೆಟ್ಟದಮಾದಹಳ್ಳಿ -ಬೇಗೂರು ರಸ್ತೆಯಲ್ಲಿವಾಹನದಲ್ಲಿಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ಹಾಗೂ ಇಬ್ಬರು ವ್ಯಕ್ತಿಗಳನ್ನು ಬೇಗೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಕ್ಕಿ ಸಾಗಣೆ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬೆಟ್ಟದಮಾದಹಳ್ಳಿ-ಬೇಗೂರು ರಸ್ತೆಯಲ್ಲಿಬರುತ್ತಿದ್ದ ವಾಹನವನ್ನು ತಡೆದು ಪರಿಶೀಲಿಸಿದಾಗ 10.90 ಕ್ವಿಂಟಾಲ್ ಪಡಿತರ ಅಕ್ಕಿ ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.
ಪೊಲೀಸರು ವಾಹನ ಸಹಿತ ಅಕ್ಕಿ ಮೂಟೆಗಳು ಹಾಗೂ ಆರೋಪಿಗಳಾದ ತಿ.ನರಸೀಪುರದ ಹುಸೇನ್ , ಸದ್ದಾಮ್ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಅಊಓ27ಃಉಖ12

ಬೇಗೂರು ಸಮೀಪದ ಬೆಟ್ಟದಮಾದಹಳ್ಳಿ -ಬೇಗೂರು ರಸ್ತೆಯಲ್ಲಿಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.