ಬಂಟಕಲ್ ಎಂಜಿನಿಯರಿಂಗ್ ಕಾಲೇಜಿನಲ್ಲಿಕಾರ್ಗಿಲ್ ವಿಜಯ್ ದಿವಸ್ ಆಚರಣೆ

Contributed byharikatpadi@gmail.com|Vijaya Karnataka
kargil vijay divas celebrated at bantakal engineering college
ವಿಕ ಸುದ್ದಿಲೋಕ ಕಟಪಾಡಿ

ಬಂಟಕಲ್ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಎನ್ ಸಿಸಿ ಘಟಕವು ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿಭಾರತೀಯ ಸಶಸ್ತ್ರ ಪಡೆಗಳು ತೋರಿದ ಧೈರ್ಯ ಮತ್ತು ತ್ಯಾಗವನ್ನು ಗೌರವಿಸುವ ಸಲುವಾಗಿ ಜು.25ರಂದು ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಾರ್ಗಿಲ್ ಯುದ್ಧದಲ್ಲಿಭಾಗವಹಿಸಿದ್ದ ಮಾಜಿ ಸೈನಿಕ ಸುಬೇದಾರ್ ರವೀಂದ್ರ ಕಾಮತ್ ಮಾತನಾಡಿ, ಕಾರ್ಗಿಲ್ ಯುದ್ಧ ಸಂದರ್ಭದಲ್ಲಿಆದ ತಮ್ಮ ಅನುಭವಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿದೇಶಕ್ಕೆ ಸಲ್ಲಿಸಿದ ನಿಷ್ಠಾವಂತ ಸೇವೆ ಹಾಗೂ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿನೀಡಿದ ಕೊಡುಗೆಯನ್ನು ಪರಿಗಣಿಸಿ ಅವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಶೈಕ್ಷಣಿಕ ಡೀನ್ ಡಾ. ಸುದರ್ಶನ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿನಾನಾ ವಿಭಾಗದ ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಫೋಟೋ ಕ್ಯಾಪ್ಷನ್ 28ಎಚ್ ಎ ಬಂಟ