ಪೆರ್ಲ: ವೀರಕೇಸರಿ ಫ್ರೆಂಡ್ಸ್ ಕ್ಲಬ್ ಬಾಳೆಮೂಲೆ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿಉನ್ನತ ಅಂಕಗಳನ್ನು ಪಡೆದು ಸಾಧನೆ ಮಾಡಿದ ಕ್ಲಬ್ ನ ಬಾಲ ಸದಸ್ಯರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಬಾಳೆಮೂಲೆಯ ಕ್ಲಬ್ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ವಿದ್ಯಾರ್ಥಿಗಳ ಈ ಸಾಧನೆಯು ಇತರರಿಗೂ ಪ್ರೇರಣೆಯಾಗಲಿ ಮತ್ತು ಅವರ ಮುಂದಿನ ಉನ್ನತ ಶಿಕ್ಷಣಕ್ಕೆ ಈ ಪುರಸ್ಕಾರವು ಮತ್ತಷ್ಟು ಪ್ರೋತ್ಸಾಹ ನೀಡಲಿ ಎಂದು ಸಂಘಟಕರು ಆಶಿಸಿದರು. ಈ ಸಂದರ್ಭ ವೀರಕೇಸರಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕ್ಲಬ್ ನ ಸರ್ವ ಸದಸ್ಯರು ಉಪಸ್ಥಿತರಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.8 ಪಿಎಲ್ ವೀರಕೇಸರಿ