(ಬೆಂ.ಗೆ) ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

Contributed by: nagaraj.navimane@timesgroup.com|Vijaya Karnataka•
siddaramaiah expresses condolences on the death of singer s janaki
ವಿಕ ಸುದ್ದಿಲೋಕ ಮೈಸೂರು

ಖ್ಯಾತ ಗಾಯಕಿ ಎಸ್ .ಜಾನಕಿ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
‘‘ಎಸ್ .ಜಾನಕಿ ಅವರ ನಿಧನದ ಸುದ್ದಿ ನೋವುಂಟು ಮಾಡಿದೆ. ಕನ್ನಡ ಭಾಷೆಯೂ ಸೇರಿದಂತೆ 20 ಭಾಷೆಗಳಲ್ಲಿ48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ, 6 ದಶಕಗಳ ಕಾಲ ತಮ್ಮ ಕಂಠಸಿರಿಯ ಮೂಲಕ ಸಂಗೀತ ಸೇವೆಗೈದ ಮೇರು ಪ್ರತಿಭೆಯೊಂದು ನಮ್ಮನ್ನಗಲಿರುವುದು ಕಲಾ ಜಗತ್ತಿಗಾಗಿರುವ ತುಂಬಲಾರದ ನಷ್ಟ. ಜಾನಕಮ್ಮನವರ ಧ್ವನಿಯಿಲ್ಲದ ಚಿತ್ರಗಳೇ ಅಪರೂಪ ಎನ್ನುವ ಕಾಲವೊಂದಿತ್ತು. ಆ ಮಟ್ಟಿನ ಬೇಡಿಕೆಯನ್ನು ತಮ್ಮ ಅನನ್ಯ ಕಂಠದ ಮೂಲಕ ಸೃಷ್ಟಿಸಿದ್ದ ಸಂಗೀತಶಾರದೆಯ ವರಪುತ್ರಿ ಅವರು. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬವರ್ಗ ಮತ್ತು ಕೋಟ್ಯಂತರ ಸಂಗೀತ ಪ್ರಿಯರಿಗೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿಪ್ರಾರ್ಥಿಸುತ್ತೇನೆ,’’ ಎಂದು ತಿಳಿಸಿದ್ದಾರೆ.