ವಿಕ ಸುದ್ದಿಲೋಕ ಮುಳಬಾಗಲು ನಗರದ ನೇತಾಜಿ ಕ್ರೀಡಾಂಗಣದಲ್ಲಿಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಗುವುದು. ನಾನಾ ಇಲಾಖೆಗಳ ಅಧಿಕಾರಿಗಳು ಹಾಗೂ ನಾನಾ ಸಂಘ ಸಂಸ್ಥೆಗಳ ಮುಖಂಡರು ಸಂಪೂರ್ಣ ಸಹಕಾರ ನೀಡಬೇಕೆಂದು ಶಾಸಕ ಸಮೃದ್ಧಿ ಮಂಜುನಾಥ್ ತಿಳಿಸಿದರು.
ನಗರದ ತಾಪಂ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿಮಾತನಾಡಿದ ಅವರು, ಮೂರು ವರ್ಷಗಳಿಂದ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ, ಕನ್ನಡರಾಜ್ಯೋತ್ಸವ, ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಅದೇ ರೀತಿ ಈ ವರ್ಷ ಕೆಂಪೇಗೌಡ ಜಯಂತಿಯನ್ನು ವೈಭವದಿಂದ ಆಚರಿಸಲಾಗುವುದು ಎಂದು ತಿಳಿಸಿದರು.
ಈ ಬಾರಿ ಗ್ರಾಮಾಂತರ ಪ್ರದೇಶಗಳಲ್ಲಿರುವ ಶಾಲೆಗಳಲ್ಲಿವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತಾಪಂ ಇಒ ಅವರ ನೇತೃತ್ವದಲ್ಲಿಎಲ್ಲಾಪಿಡಿಒಗಳು ಸಿಹಿ ವಿತರಣೆ ಮಾಡುತ್ತಾರೆ. ಅದೇ ರೀತಿ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ನಗರಸಭಾ ವತಿಯಿಂದ ಸಿಹಿ ವಿತರಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿವಿನೂತನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ನಾನಾ ಕ್ಷೇತ್ರಗಳಲ್ಲಿಉತ್ತಮ ಸಾಧನೆ ಮಾಡಿರುವವರನ್ನು ಸನ್ಮಾನಿಸಲಾಗುವುದು. ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ತಹಸೀಲ್ದಾರ್ ನೇತೃತ್ವದಲ್ಲಿತಂಡ ರಚನೆ ಮಾಡಲಾಗುವುದು. ನಾನಾ ಇಲಾಖೆಯ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಮುಗಿಸಿಕೊಂಡು ತಾಲೂಕು ಮಟ್ಟದ ಕಾರ್ಯಕ್ರಮಕ್ಕೆ ಹಾಜರಾಗಬೇಕು ಎಂದು ತಿಳಿಸಿದರು.
ತಹಸೀಲ್ದಾರ್ ವಿ.ಗೀತಾ, ತಾಪಂ ಇಒ ಬಾಬು, ನಗರಸಭೆ ಆಯುಕ್ತ ಆಂಜನೇಯಲು, ಬಿಇಒ ಆನಂದ್ , ಡಿಸಿಸಿ ಬ್ಯಾಂಕ್ ನಿರ್ದೇಶಕ ರಘುಪತಿರೆಡ್ಡಿ, ಸಹಕಾರಿ ಯೂನಿಯನ್ ನಿರ್ದೇಶಕ ಲಕ್ಷಿತ್ರ್ಮೕನಾರಾಯಣ, ದೈಹಿಕ ಶಿಕ್ಷಣಾಧಿಕಾರಿ ಉಮೇಶ್ , ಜೆಡಿಎಸ್ ಮುಖಂಡರಾದ ಗೊಲ್ಲಹಳ್ಳಿ ಜಗದೀಶ್ , ಸಿದ್ದಘಟ್ಟ ರಮೇಶ್ , ಕನ್ನಡಪರ ಹೋರಾಟಗಾರ ಶಂಕರ್ ಕೇಸರಿ, ಪ್ರಕಾಶ್ ಗೌಡ, ಹರೀಶ್ ಗೌಡ, ಗೀತಾ, ಕಾರ್ ಶಂಕರ್ , ದಲಿತಪರ ಹೋರಾಟಗಾರ ಕೀಳಹೊಳಲಿ ಸತೀಶ್ , ಗಣೇಶ್ ಪಾಳ್ಯಕೃಷ್ಣ, ಕÓವಿರೆಡ್ಡಿಹಳ್ಳಿ ರಾಜು, ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳು ಇದ್ದರು.
29ಎಂಬಿಎಲ್ ಫೋಟೋ 4 ಮುಳಬಾಗಲು ನಗರದ ತಾಪಂ ಸಭಾಂಗಣದಲ್ಲಿಸ್ವಾತಂತ್ರ್ಯ ದಿನಾಚರಣೆ ಸಂಬಂಧ ಶಾಸಕ ಸಮೃದ್ಧಿ ಮಂಜುನಾಥ್ ಅಧ್ಯಕ್ಷತೆಯಲ್ಲಿಪೂರ್ವಭಾವಿ ಸಭೆ ನಡೆಯಿತು.