ಶುದ್ಧ ನೀರು ಪೂರೈಕೆಗೆ ಆದ್ಯತೆ ನೀಡಿ

Contributed byshivumoktedar@gmail.com|Vijaya Karnataka
priority for clean water instructions from officials
ಚಿತ್ರ : 30ಎಡಿ4

ಔರಾದ್ ತಾಂ ಸಭಾಂಗಣದಲ್ಲಿಗುರುವಾರ ಪಿಡಿಒಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಇಒ ಕಿರಣ ಪಾಟೀಲ್ , ಎಡಿ ಶಿವಕುಮಾರ ಘಾಟೆ ಇದ್ದರು.
***

ಶುದ್ಧ ನೀರು ಪೂರೈಕೆಗೆ ಆದ್ಯತೆ ನೀಡಿ

ವಿಕ ಸುದ್ದಿಲೋಕ ಔರಾದ್

ಇದೀಗ ಕೆಲವಡೆ ಮಳೆಯಾಗುತ್ತಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿನೀರಿನ ಮೂಲಗಳು ಕಲುಷಿತಗೊಳ್ಳುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿಅಧಿಕಾರಿಗಳು ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ತಾಪಂ ಇಒ ಕಿರಣ ಪಾಟೀಲ್ ಸೂಚಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿಗುರುವಾರ ನಡೆದ ತಾಲೂಕಿನ ಎಲ್ಲಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿಮಾತನಾಡಿದರು. ಮಳೆಗಾಲದ ಸಂದರ್ಭದಲ್ಲಿಕುಡಿಯುವ ನೀರಿನ ಮೂಲಗಳ ಬಗ್ಗೆ ಹೆಚ್ಚಿನ ನಿಗಾ ವಹಿಸುವುದು ಅಗತ್ಯವಾಗಿದೆ. ಗ್ರಾಮಗಳಲ್ಲಿರುವ ಬಾವಿ, ಕೊಳವೆಬಾವಿ, ನೀರಿನ ಟ್ಯಾಂಕ್ ಗಳು ಸೇರಿ ಎಲ್ಲಜಲಮೂಲ ಪರಿಶೀಲಿಸಿ, ನೀರಿನ ಗುಣಮಟ್ಟದ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದರು.

ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಮಾತನಾಡಿ, ವಿಬಿಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಲಭ್ಯವಿರುವ ಅನುದಾನ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಗ್ರಾಮಗಳ ಅಗತ್ಯತೆ ಆಧರಿಸಿ ಅಭಿವೃದ್ಧಿ ಕಾಮಗಾರಿ ಕೈಗೊಂಡು, ಗುಣಮಟ್ಟದ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಸರಕಾರದ ವಿವಿಧ ಯೋಜನೆಗಳು ಗ್ರಾಮೀಣ ಜನರಿಗೆ ತಲುಪುವಂತೆ ಅಧಿ ಕಾರಿಗಳು ಕಾರ್ಯನಿರ್ವಹಿಸಬೇಕು. ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಪಂಚಾಯಿತಿ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದರು. ವ್ಯವಸ್ಥಾಪಕ ಸಂಜುಕುಮಾರ ಗೋರನಾಳ್ಳೆ, ತಾಂತ್ರಿಕ ಸಂಯೋಜಕ ಆನಂದ ಕಾಳಗಾಪೂರೆ, ತಾಲೂಕಿನ ಎಲ್ಲಪಿಡಿಒಗಳು, ತಾಂತ್ರಿಕ ಸಹಾಯಕರು, ಡಿಇಒ, ಐಇಸಿ ಸಂಯೋಜಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

*** ಬಾಕ್ಸ್ --

ಕೇಂದ್ರ ಸ್ಥಾನದಲ್ಲಿದ್ದು ಸ್ಪಂದಿಸಿ

ಮಳೆ ನೀರು ಸೇರಿ ನೀರಿನ ಮೂಲಗಳು ಕಲುಷಿತಗೊಂಡರೆ ಸಾರ್ವಜನಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿಯೇ ಇದ್ದು, ಗ್ರಾಮಗಳಲ್ಲಿನ ಸಮಸ್ಯೆಗಳನ್ನು ನಿರಂತರವಾಗಿ ಮೇಲ್ವಿಚಾರಣೆ ನಡೆಸಬೇಕು. ಕುಡಿಯುವ ನೀರು, ಸ್ವಚ್ಛತೆ ಹಾಗೂ ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಇಒ ಕಿರಣ ಪಾಟೀಲ್ ಹೇಳಿದರು.

ಮಳೆಗಾಲದಲ್ಲಿಜ್ವರ ಸೇರಿ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಆರೋಗ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಗ್ರಾಮಗಳಲ್ಲಿಸ್ವಚ್ಛತೆ ಕಾಪಾಡಲು ಹಾಗೂ ಚರಂಡಿಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಪಿಡಿಒಗಳಿಗೆ ಎಡಿ ಶಿವಕುಮಾರ ಘಾಟೆ ನಿರ್ದೇಶನ ನೀಡಿದರು.