ಚಿಕ್ಕಮಗಳೂರು : ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿಆ. 1ರಂದು ಬೆಳಗ್ಗೆ 11 ಗಂಟೆಗೆ ಡಿಎಸಿಜಿ ಸರಕಾರಿ ಪಾಲಿಟೆಕ್ನಿಕ್ ಸಭಾಂಗಣದಲ್ಲಿಡಾ.ಮಹಾಂತ ಶಿವಯೋಗಿಗಳ ಜನ್ಮ ದಿನದ ಅಂಗವಾಗಿ ವ್ಯಸನಮುಕ್ತ ದಿನಾಚರಣೆ ಹಾಗೂ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.ಶಾಸಕ ಎಚ್ .ಡಿ.ತಮ್ಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ಉಪನ್ಯಾಸಕ ಬಿ.ತಿಪ್ಪೇರುದ್ರಪ್ಪ ಅವರು ಡಾ.ಮಹಾಂತ ಶಿವಯೋಗಿಗಳ ಜೀವನ ಚರಿತ್ರೆ ಕುರಿತು ಹಾಗೂ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾನಸಿಕ ಆರೋಗ್ಯ ತಜ್ಞರಾದ ಡಾ.ವಿನಯ್ ಅವರು ಮದ್ಯಪಾನ ಮತ್ತು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡುವರು.