ನೀಟ್ ಪರೀಕ್ಷೆ ಸುಸೂತ್ರ

Contributed byshreekanta.akki@timesofindia.com|Vijaya Karnataka
neet exam successfully conducted in koppal

ನೀಟ್ ಪರೀಕ್ಷೆ ಸುಸೂತ್ರ

11 ಕೇಂದ್ರಗಳಲ್ಲಿ3,700 ವಿದ್ಯಾರ್ಥಿಗಳು

ವಿಕ ಸುದ್ದಿಲೋಕ ಕೊಪ್ಪಳ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್ ) ಮರು ಪರೀಕ್ಷೆ ಹಿನ್ನಲೆಯಲ್ಲಿಜಿಲ್ಲೆಯಲ್ಲಿಒಟ್ಟು 11 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು,

3,700 ವಿದ್ಯಾರ್ಥಿಗಳು ಭಾನುವಾರ ಪರೀಕ್ಷೆಗೆ ಹಾಜರಾದರು.

ಪರೀಕ್ಷೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15ರವರೆಗೆ ನಡೆಯಿತು. ನಾನಾ ಕೇಂದ್ರಗಳತ್ತ ವಿದ್ಯಾರ್ಥಿಗಳು ಬೆಳಗ್ಗೆಯಿಂದ ಆಗಮಿಸುತ್ತಿರುವ ದೃಶ್ಯ ಕಂಡುಬಂದಿತು.

ನೀಟ್ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿತ್ತು.

ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಪೊಲೀಸ್ ಬಂದೋಬಸ್ ್ತ ಏರ್ಪಡಿಸಲಾಗಿದ್ದು, ಭದ್ರತಾ ದೃಷ್ಟಿಯಿಂದ ಕೇಂದ್ರ ಸರಕಾರದ ಸಿಆರ್ ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

=====

ಪರೀಕ್ಷಾ ಕೇಂದ್ರಗಳಿಗೆ ಡಿಸಿ, ಎಸ್ಪಿ ಭೇಟಿ

ಜಿಲ್ಲೆಯ ನಾನಾ ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಪರಿಶೀಲಿಸಲು ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಹಾಗೂ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಅರಸಿದ್ದಿ ಭೇಟಿ ನೀಡಿ, ಅಗತ್ಯ ಮಾಹಿತಿ

ಪಡೆದುಕೊಂಡರು. ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಭದ್ರತೆ ಹಾಗೂ ಪರೀಕ್ಷಾ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು.

ಪ್ರಶ್ನೆ ಪತ್ರಿಕೆಗಳನ್ನು ನಾನಾ ಬ್ಯಾಂಕ್ ಗಳಲ್ಲಿಸುರಕ್ಷಿತವಾಗಿ ಇರಿಸಲಾಗಿದ್ದು, ಸಿಆರ್ ಪಿಎಫ್ ಸಿಬ್ಬಂದಿ ಕಟ್ಟುನಿಟ್ಟಿನ ಭದ್ರತೆಯೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷೆ ಯಾವುದೇ ಅಡೆತಡೆಗಳಿಲ್ಲದೆ ಸುಗಮವಾಗಿ ನಡೆಯುತ್ತಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ತಿಳಿಸಿದ್ದಾರೆ.

ಧಿಧಿ-

ಫೋಟೋ

21 ಕೆಪಿಎಲ್ ಫೋಟೋ05

ಕೊಪ್ಪಳ ನಗರದ ಸರಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭಾನುವಾರ ಡಿಸಿ, ಎಸ್ಪಿ ಅವರು ಭೇಟಿ ನೀಡಿ, ಪರೀಕ್ಷಾ ಸಿದ್ಧತೆ ಪರಿಶೀಲಿಸಿದರು.

ಧಿಧಿ-

21 ಕೆಪಿಎಲ್ ಫೋಟೋ 06

ವಿದ್ಯಾರ್ಥಿಗಳನ್ನು ಪರಿಶೀಲಿಸಿ, ಪರೀಕ್ಷಾ ಕೇಂದ್ರದೊಳಗೆ ಬಿಡಲಾಯಿತು.

ಧಿ-

21 ಕೆಪಿಎಲ್ ಫೋಟೋ 07

ನೀಟ್ ಪರೀಕ್ಷೆ ಕೇಂದ್ರ ಪರೀಶಿಲಿಸಲು ಆಗಮಿಸಿದ್ದ ಡಿಸಿ ಡಾ.ಸುರೇಶ ಇಟ್ನಾಳ್ ಅವರನ್ನು ಭದ್ರತಾ ಪಡೆ ಪರಿಶೀಲಿಸಿ, ಒಳಗೆ ಬಿಟ್ಟರು.

ಧಿ-

21 ಕೆಪಿಎಲ್ ಫೋಟೋ 08

ನೀಟ್ ಪರೀಕ್ಷೆಗೆ ತಡವಾಗಿ ಬಂದ ಗಂಗಾವತಿ ಮೂಲದ ವಿದ್ಯಾರ್ಥಿನಿಗೆ ಕೊಪ್ಪಳ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಪ್ರವೇಶಕ್ಕೆ ನಿರಾಕರಣೆ ಮಾಡಲಾಯಿತು.

ಧಿಧಿ