ಯೋಗ ಮಾಡುವುದರಿಂದ ಏಕಾಗ್ರತೆ ಮತ್ತು ಮಾನಸಿಕ ನೆಮ್ಮದಿಯನ್ನು ಹೆಚ್ಚಿಸಬಹುದಾಗಿದೆ ಜತೆಗೆ ಒತ್ತಡ ಮತ್ತು ಆತಂಕ ನಿವಾರಣೆಯಾಗಲು ಸಾಧ್ಯವಾಗುತ್ತದೆ ಎಂದು ಅಮರಜ್ಯೋತಿ ವಿದ್ಯಾ ಸಂಸ್ಥೆಗಳ ಕಾರ್ಯದರ್ಶಿ ಯಲುವಹಳ್ಳಿ ಆರ್ .ಅಶೋಕ್ ಕುಮಾರ್ ತಿಳಿಸಿದರು.ನಗರದ ಅಮರಜ್ಯೋತಿ ವಿದ್ಯಾ ಸಂಸ್ಥೆಯ ಆವರಣದಲ್ಲಿಏರ್ಪಡಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ 2014ರಲ್ಲಿವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿಯೋಗ ದಿನದ ಕುರಿತು ಪ್ರಸ್ತಾಪ ಮಾಡಿದ್ದರು. ಇದಕ್ಕೆ ವಿಶ್ವ ಸಂಸ್ಥೆ ಅನುಮೋದನೆ ನೀಡಿದ್ದರಿಂದ 2015ರಿಂದ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಯೋಗ ಮಾಡುವುದರಿಂದ ಕ್ರಿಯಾಶೀಲತೆ ಹಾಗೂ ಜ್ಞಾಪಕಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಡಾ.ಮಂಜುಳ ಮಾತನಾಡಿ, ಆರೋಗ್ಯವೇ ಭಾಗ್ಯ ಎಂಬುದನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಂಡು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಯೋಗ ಮಾಡುವುದನ್ನು ರೂಢಿ ಮಾಡಿಕೊಂಡರೆ ಮನಸ್ಸು ಮತ್ತು ದೇಹದ ನಡುವಿನ ಸಮತೋಲನವನ್ನು ಕಾಪಾಡಲು ಸಹಕಾರಿಯಾಗುತ್ತದೆ. ಕಾನ್ಸರ್ , ದೀರ್ಘಕಾಲದ ಉಸಿರಾಟದ ಕಾಯಿಲೆಗಳು ಮತ್ತು ಮಧುಮೇಹವನ್ನು ಹತೋಟಿಯಲ್ಲಿಇಡಲು ಯೋಗ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.
ಆರ್ ಎಸ್ ಎಸ್ ನಾರಾಯಣಪ್ಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿಆಹಾರ ಶೈಲಿ ಹಾಗೂ ಒತ್ತಡಗಳಿಂದ ಮನುಷ್ಯ ನಾನಾ ಕಾಯಿಲೆಗಳಿಂದ ನರಳುತ್ತಿದ್ದಾನೆ. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾರೆ ಯೋಗ ಮಾಡುವುದನ್ನು ರೂಢಿ ಮಾಡಿಕೊಳ್ಳಬೇಕು. ಯೋಗ ಮಾಡುತ್ತಿರುವವರು ಹಲವಾರು ಕಾಯಿಲೆಗಳಿಂದ ಮುಕ್ತಿಹೊಂದಿ ಉತ್ತಮ ಜೀವನ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿನಾನಾ ಪ್ರಕಾರಗಳ ಯೋಗಾಸನಗಳನ್ನು ಮಾಡಲಾಯಿತು. ಯೋಗ ಶಿಕ್ಷಕರಾದ ಶ್ರೀನಿವಾಸ್ , ಮಂಜುಳಮ್ಮ, ಯೋಗ ಬಂಧುಗಳಾದ ರವಿ, ಮಂಜುನಾಥ್ , ರಾಮಮೂರ್ತಿ, ಆಶಾ, ಉಮಾಶಂಕರ್ , ಶ್ರೀನಾಥ್ , ಕಾಲೇಜಿನ ಪ್ರಿನ್ಸಿಪಾಲ್ ಸತ್ಯಮಯ, ಜಗದೀಶ್ , ವ್ಯವಸ್ಥಾಪಕ ರಘು, ಮುಖ್ಯ ಶಿಕ್ಷಕರಾದ ಚಂಗಾರೆಡ್ಡಿ, ಮುನಿನಾರಾಯಣಪ್ಪ ಸೇರಿದಂತೆ ಶಿಕ್ಷಕ ವರ್ಗ ಇದ್ದರು.
22 ಎಂ.ಬಿ.ಎಲ್ ಪೋಟೋ 1 ಮುಳಬಾಗಲು ನಗರದ ಅಮರಜ್ಯೋತಿ ವಿದ್ಯಾ ಸಂಸ್ಥೆಯ ಆವರಣದಲ್ಲಿಏರ್ಪಡಿಸಿದ್ದ ಅಂತರಾಷ್ಟ್ರೀಯ ಯೋಗಾ ದಿನಾಚರಣೆಯನ್ನು ಕಾರ್ಯದರ್ಶಿ ಯಲುವಹಳ್ಳಿ ಅಶೋಕ್ ಕುಮಾರ್ ಉದ್ಘಾಟಿಸಿದರು.
22 ಎಂ.ಬಿ.ಎಲ್ ಪೋಟೋ 2 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಯೋಗಾಸನ ಪ್ರದರ್ಶಿಸಿದರು.