ವಿಕ ಸುದ್ದಿಲೋಕ ಬೆಂಗಳೂರು ನಗರದ ಅರಮನೆ ಮೈದಾನದಲ್ಲಿಭಾನುವಾರ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವಾಗ ಆಗಿರುವ ಸಂಚಾರ ದಟ್ಟಣೆ ಸಮಸ್ಯೆಯಿಂದ ನೀಟ್ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಲ್ಲಿಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿಷಾದ ವ್ಯಕ್ತಪಡಿಸಿದ್ದಾರೆ. ಅಧ್ಯಕ್ಷರಾಗಿ ಪದಗ್ರಹಣದ ಬಳಿಕ ಪಕ್ಷದ ಕಚೇರಿಯಲ್ಲಿಸುದ್ದಿಗೋಷ್ಠಿಯಲ್ಲಿಮಾತನಾಡಿ, ‘‘ಪರೀಕ್ಷೆ ಮಿಸ್ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ಮುಂದಿನ ಪರೀಕ್ಷೆ ಬರೆಯಲು ಎಲ್ಲಸಹಾಯ ಮಾಡುತ್ತೇವೆ,’’ಎಂದು ತಿಳಿಸಿದ್ದಾರೆ. ‘‘ಕಾರ್ಯಕ್ರಮದಿಂದ ತೊಂದರೆ ಅನುಭವಿಸಿರುವ ವಿದ್ಯಾರ್ಥಿಗಳನ್ನು ಭೇಟಿ ಮಾಡಲು ನಮ್ಮ ತಂಡ ಪ್ರಯತ್ನ ಮಾಡುತ್ತಿದ್ದು, ಅವರಿಗೆ ಆಗಿರುವ ನಷ್ಟ ಭರಿಸಲು ಸಿದ್ಧರಿದ್ದೇವೆ. ಆದರೆ, ಬಿಜೆಪಿಯವರು ಈ ವಿಚಾರದಲ್ಲಿಕೆಲವು ವಿದ್ಯಾರ್ಥಿಗಳಿಂದ ಸುಳ್ಳು ಹೇಳಿಸಿರುವ ಸಾಧ್ಯತೆಗಳಿವೆ,’’ ಎಂದು ಸಂಶಯ ವ್ಯಕ್ತಪಡಿಸಿದರು. ‘‘ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಭಾನುವಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದರಿಂದ ಸ್ವಲ್ಪಮಟ್ಟಿಗೆ ಸಾರ್ವಜನಿಕರಿಗೆ ತೊಂದರೆ ಆಗಿರುವುದನ್ನು ಅಲ್ಲಗಳೆಯುವುದಿಲ್ಲ. ಆದರೆ, ನೀಟ್ ಪರೀಕ್ಷೆ 1.30ಕ್ಕೆ ಶುರುವಾಗಿದ್ದು, ನಮ್ಮ ಪಕ್ಷದ ಕಾರ್ಯಕ್ರಮಕ್ಕೆ ಬರಬೇಕಿದ್ದ ಎಲ್ಲಬಸ್ ಗಳು ಬೆಳಗ್ಗೆ 10.30ಕ್ಕೆ ಅರಮನೆ ಮೈದಾನಕ್ಕೆ ತಲುಪಿದ್ದವು. ಪೊಲೀಸರು ಮತ್ತು ಸೇವಾ ದಳದ ಕಾರ್ಯಕರ್ತರು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೆಲಸ ಮಾಡಿದ್ದಾರೆ. ಆದರೂ, 2,3 ಮಕ್ಕಳಿಗೆ ತೊಂದರೆ ಆಗಿದೆ ಎಂಬ ಮಾಹಿತಿ ಇದ್ದು, ಅದಕ್ಕಾಗಿ ವಿಷಾದಿಸುತ್ತೇನೆ,’’ ಎಂದರು. ಬಿಜೆಪಿ ಸರಣಿ ಸುಳ್ಳು: ‘‘ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಿಂದ ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಯಿತು ಎಂದು ಸರಣಿ ಸುಳ್ಳುಗಳನ್ನು ಬಿಜೆಪಿ ನಾಯಕರು ಹರಡುತ್ತಿದ್ದಾರೆ. ಹಾಗಾದರೆ ನೀಟ್ ಪರೀಕ್ಷೆ ಮುಂದೂಡಿಕೆಯಾಗಿದ್ದು ಏಕೆ? ಸಿಬಿಎಸ್ ಸಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾದವು. 12 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಾಗ ಪ್ರಧಾನಿ ಮೋದಿ ಅವರಾಗಲಿ, ಶಿಕ್ಷಣ
ಸಚಿವ ಧರ್ಮೇಂದ್ರ ಪ್ರಧಾನ್ ಅವರಾಗಲಿ ವಿಷಾದವನ್ನೇ ವ್ಯಕ್ತಪಡಿಸಲಿಲ್ಲ. ಆದರೆ,ಕಾಂಗ್ರೆಸ್ ಕಾರ್ಯಕ್ರಮದಿಂದ ನಡೆಯಬಾರದ ಪ್ರಮಾದ ನಡೆದಿದೆ ಎಂಬಂತೆ ಬಿಜೆಪಿ
ಸಂಸದ ತೇಜಸ್ವಿ ಸೂರ್ಯ ಬೊಬ್ಬೆ ಹಾಕುತ್ತಿದ್ದಾರೆ,’’ ಎಂದು ಕಿಡಿಕಾರಿದರು.