ತುಮಕೂರು: ಜಿಲ್ಲಾಕುಂಚಿಟಿಗ ಒಕ್ಕಲಿಗರ ವಿದ್ಯಾಭಿವೃದ್ಧಿ ಸಂಘದ ಮಹಿಳಾ ವಿದ್ಯಾರ್ಥಿ ನಿಲಯ, ಶ್ರೀರಂಗ ವಿದ್ಯಾಮಂದಿರದ ಕಟ್ಟಡ ನವೀಕರಣ ಹಾಗೂ ಬಾಲಕರ ವಿದ್ಯಾರ್ಥಿ ನಿಲಯ, ಆಧುನಿಕ ಶೈಲಿಯ ಗ್ರಂಥಾಲಯ ಮತ್ತು ಧ್ಯಾನ ಮಂದಿರದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಜೂ.28ರಂದು ನಗರದ ಕುಂಚಿಟಿಗ ಸಮುದಾಯ ಭವನದಲ್ಲಿಹಮ್ಮಿಕೊಳ್ಳಲಾಗಿದೆ. ರಾಜ್ಯ ಸರಕಾರದ ದೆಹಲಿ ವಿಶೇಷ ಪ್ರತಿನಿಧಿ, ಶಾಸಕ ಟಿ.ಬಿ. ಜಯಚಂದ್ರ, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ ್ಣಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾಕುಂಚಿಟಿಗ ಒಕ್ಕಲಿಗರ ವಿದ್ಯಾಭಿವೃದ್ಧಿ ಸಂಘದ ಅಧ್ಯಕ್ಷ ಡಾ.ಕೆ. ಶ್ರೀಧರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿತಿಳಿಸಿದೆ.