ಅಯ್ಯಪ್ಪಸ್ವಾಮಿ ದೇಗುಲದಲ್ಲಿವಿಶೇಷ ಪೂಜೆ

Contributed byravimgl.kumar13@gmail.com|Vijaya Karnataka
sri ayyappa swami temple 27th anniversary special worship events
ಅಯ್ಯಪ್ಪಸ್ವಾಮಿ ದೇಗುಲದಲ್ಲಿವಿಶೇಷ ಪೂಜೆ

ಚಿತ್ರದುರ್ಗ: ನಗರದ ಮೆದೇಹಳ್ಳಿ ರಸ್ತೆಯ ಶ್ರೀಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ27ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಸೋಮವಾರ ನಾನಾ ಧಾರ್ಮಿಕ ಕಾರ್ಯಕ್ರಮ ಜರುಗಿದವು.
ದೇವಸ್ಥಾನ ಹಿರಿಯ ಅರ್ಚಕ ಸತೀಶ್ ಶರ್ಮ ಹಾಗೂ ಸಂಗಡಿಗರಿಂದ ಗಣ ಹೋಮ , ಚಂಡಿಕಾ ಹೋಮ ಸೇರಿದಂತೆ ಮತ್ತಿತರೆ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಹೋಮದ ಪೂರ್ಣಾಹುತಿಗೆ ಭಕ್ತರು ಧವಸ ಧಾನ್ಯ, ಸೀರೆ, ಕುಪ್ಪಸ, ಹಣ್ಣು ಹಾಗೂ ಇನ್ನಿತರೆ ಪೂಜಾ ಸಾಮಗ್ರಿಗಳನ್ನು ಅರ್ಪಿಸಿದರು.

ಶ್ರೀಅಯ್ಯಪ್ಪಸ್ವಾಮಿ ಮೂರ್ತಿಗೆ ಬೆಳಗ್ಗೆ ಅಭಿಷೇಕ ನೆರವೇರಿಸಿದ ಬಳಿಕ ಬಗೆ ಬಗೆಯ ಪುಷ್ಪಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ದೇವರಿಗೆ ಹೂವು, ಹಣ್ಣು, ಕಾಯಿ ಸಮರ್ಪಿಸಿ, ದೇವರ ದರ್ಶನ ಪಡೆದು ಪುನೀತರಾದರು. ಭಕ್ತರಿಗೆ ಅನ್ನ ಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿತ್ತು.

ಉದ್ಯಮಿಗಳಾದ ಮಲ್ಲಿಕಾರ್ಜುನ ಸ್ವಾಮಿ, ಹನುಮಂತರೆಡ್ಡಿ, ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಶರಣ್ ಕುಮಾರ್ , ಟ್ರಸ್ಟ್ ಉಪಾಧ್ಯಕ್ಷ ಮಲ್ಲಿಕಾರ್ಜುನ್ , ಮೋಹನ್ ಕುಮಾರ್ , ಇಂದ್ರಪ್ಪ, ಸೂರಪ್ಪ, ರೇಷ್ಮೆ ಮಂಜುನಾಥ್ , ಜಗದೀಶ್ ಇದ್ದರು.

----

22ಸಿಟಿಡಿ37

ಚಿತ್ರದುರ್ಗದ ಮೆದೇಹಳ್ಳಿ ರಸ್ತೆಯ ಶ್ರೀಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ27ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಸೋಮವಾರ ಗಣ ಹೋಮ, ಚಂಡಿಕಾ ಹೋಮ ನೆರವೇರಿಸಲಾಯಿತು.

ಫೋಟೊ ಕ್ಯಾಪ್ಷನ್ /22ಸಿಟಿಡಿ37ಎ

ಚಿತ್ರದುರ್ಗದ ಮೆದೇಹಳ್ಳಿ ರಸ್ತೆಯ ಶ್ರೀಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ27ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಸೋಮವಾರ ಸ್ವಾಮಿಯ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.