ವಿಕ ಸುದ್ದಿಲೋಕ ಮೈಸೂರುಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಕೆ-ಸೆಟ್ ಮತ್ತು ಯುಜಿಸಿ-ನೆಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಏರ್ಪಡಿಸಿದ್ದ 45 ದಿನದ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಜೂ.25ರಂದು ಬೆಳಗ್ಗೆ 11 ಗಂಟೆಗೆ ಕಾವೇರಿ ಸಭಾಂಗಣದಲ್ಲಿಹಮ್ಮಿಕೊಂಡಿದೆ.
ಮೈಸೂರು ವಿಶ್ವ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎನ್ .ಕೆ. ಲೋಕನಾಥ್ ಅವರು ತರಬೇತಿ ಶಿಬಿರಾರ್ಥಿಗಳಿಗೆ ಶುಭ ಹಾರೈಸುವರು. ಮೈಸೂರು ನಗರದ ಪೊಲೀಸ್ ಉಪ ಆಯುಕ್ತ 2020ರ ಬ್ಯಾಚ್ ನ ಐಪಿಎಸ್ ಅಧಿಕಾರಿ ಡಾ. ಹರ್ಷ ಪ್ರಿಯಂವದ ಮುಖ್ಯ ಭಾಷಣ ಮಾಡುವರು. ಮೈಸೂರು ಜಿಲ್ಲೆ ಅಪರ ಜಿಲ್ಲಾಧಿಕಾರಿ ಆರ್ . ಐಶ್ವರ್ಯ ‘ಮುಕ್ತಭಂಡಾರ ಅಧ್ಯಯನ ಪುಸ್ತಕ ಬಿಡುಗಡೆ ಮಾಡುವರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅಧ್ಯಕ್ಷತೆ ವಹಿಸುವರು. ಕುಲಸಚಿವ ಪ್ರೊ. ನವೀನ್ ಕುಮಾರ್ ಎಸ್ .ಕೆ., ಪರೀಕ್ಷಾಂಗ ಕುಲಸಚಿವ ಡಾ.ಸಿ.ಎಸ್ . ಆನಂದಕುಮಾರ್ , ಶೈಕ್ಷಣಿಕ ಡೀನ್ ಪ್ರೊ.ಎಂ. ರಾಮನಾಥಂ ನಾಯ್ಡು, ಅಧ್ಯಯನ ಕೇಂದ್ರದ ಡೀನ್ ಡಾ.ಎನ್ . ಆನಂದಗೌಡ, ಹಣಕಾಸು ಅಧಿಕಾರಿ ಡಾ.ಎಸ್ . ನಿರಂಜನ್ ರಾಜ್ ಉಪಸ್ಥಿತರಿರುವರು. ರಾಜ್ಯದ ವಿವಿಧ ಜಿಲ್ಲೆಗಳಿಂದ 228 ಅಭ್ಯರ್ಥಿಗಳು ತರಬೇತಿಯಲ್ಲಿಭಾಗವಹಿಸಿದ್ದಾರೆ ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಪ್ರಕಟಣೆಯಲ್ಲಿತಿಳಿಸಿದ್ದಾರೆ.