ಯೋಗದಿಂದ ಶಿಸ್ತು, ಸಂಸ್ಕಾರಯುತ ಜೀವನ ಸಾಧ್ಯ

Contributed byMruthyunjayar77@gmail.com|Vijaya Karnataka
discipline and healthy lifestyle through yoga
ವಿಕ ಸುದ್ದಿಲೋಕ ಚಿಕ್ಕಬಳ್ಳಾಪುರ

ಆರೋಗ್ಯ ವೇ ಭಾಗ್ಯ ಎಂಬ ನಾಣ್ಣುಡಿಯಂತೆ ಆರೋಗ್ಯ ಕಾಪಾಡಿಕೊಳ್ಳಲು ‘ ಯೋಗ ಭಾಗ್ಯ’ ಅಗತ್ಯ. ಯೋಗವು ದೈಹಿಕ ವ್ಯಾಯಾಮ ಮಾತ್ರವಲ್ಲ, ಅದು ಜೀವನಕ್ಕೆ ಶಿಸ್ತು , ನಡತೆ ಹಾಗೂ ಉತ್ತಮ ಸಂಸ್ಕಾರ ಕಲಿಸುವ ದಾರಿ ಎಂದು ಪ್ರಭಾರ ಮುಖ್ಯ ಶಿಕ್ಷಕ ಶಶಿಧರ ಅಭಿಪ್ರಾಯಪಟ್ಟರು.
ತಾಲೂಕಿನ ಗುಂಗಿರ್ನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿಹಮ್ಮಿಕೊಂಡಿದ್ದ ಅಂತಾರಾಷ್ಟಿ್ರೕಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿಮಾತನಾಡಿದ ಅವರು, ಸಾವಿರಾರು ವರ್ಷಗಳ ಇತಿಹಾಸ ಇರುವ ಯೋಗ ಪರಂಪರೆಗೆ ಜಾಗತಿಕವಾಗಿ ಮನ್ನಣೆ ಸಿಕ್ಕಿದೆ. ವಿಶ್ವದ ನೂರಕ್ಕೂ ಹೆಚ್ಚು ದೇಶಗಳಲ್ಲಿಏಕಕಾಲದಲ್ಲಿಯೋಗ ದಿನವನ್ನು ಆಚರಿಸಲಾಗುತ್ತಿರುವುದು ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುವ ವಿಚಾರ. ಧ್ಯಾನದ ಮೂಲಕ ಮನಸ್ಸಿನಲ್ಲಿಇರುವ ಕಲ್ಮಶ ಹೋಗಲಾಡಿಸಿ ಮಾನಸಿಕ ನೆಮ್ಮದಿ ಪಡೆಯಬಹುದು. ಯುವ ಪೀಳಿಗೆಯಲ್ಲಿಯೋಗದ ಬಗ್ಗೆ ಜಾಗೃತಿ ಮೂಡಿಸುವುದೇ ಯೋಗ ನಡಿಗೆಯ ಪ್ರಮುಖ ಉದ್ದೇಶ. ಯುವಕರು ಇದನ್ನು ತಮ್ಮ ದೈನಂದಿನ ಜೀವನದಲ್ಲಿಅಳವಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿಶಾಲೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

21 ಸಿಬಿಪಿ ಪೋಟೋ 2

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಯೋಗ ಕಾರ್ಯಕ್ರಮದಲ್ಲಿಭಾಗವಹಿಸಿದ್ದರು.