ಸಮನ್ವಯದಿಂದ ಕಾರ್ಯನಿರ್ವಹಣೆಗೆ ಪೂರ್ವ ಸಿದ್ಧತಾ ಸಭೆಯಲ್ಲಿಡಿಸಿ ಸೂಚನೆ
ವಿಕ ಸುದ್ದಿಲೋಕ ಹಾವೇರಿಜಿಲ್ಲೆಯಲ್ಲಿಇದೇ ಜೂ.28 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ ಜರುಗಲಿದೆ. ಸೊನ್ನೆಯಿಂದ ಐದು ವರ್ಷದೊಳಗಿನ ಯಾವುದೇ ಮಗು ಪಲ್ಸ್ ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಹಾಗೂ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಮಂಗಳವಾರ ಜರುಗಿದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಮುಂಚಿತವಾಗಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿಹೆಚ್ಚಿನ ಪ್ರಚಾರ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಶಾಲಾ ಮಕ್ಕಳಿಂದ ಜಾಥಾ ಮೂಲಕ ಜಾಗೃತಿ ಮೂಡಿಸಬೇಕು. ಪಂಚಾಯಿತಿಗಳಿಂದ ಗ್ರಾಮಗಳಲ್ಲಿಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಟಾಂ ಟಾಂ ಮೂಲಕ ಪ್ರಚಾರ ಕೈಗೊಳ್ಳಲು, ಪಲ್ಸ್ ಪೋಲಿಯೋ ದಿನದಂದು ಅಂಗನವಾಡಿ ಕೇಂದ್ರಗಳು ಆರಂಭ ಇರುವಂತೆ ನೋಡಿಕೊಳ್ಳಬೇಕು. ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯ ಕೊಳಚೆ ಪ್ರದೇಶಗಳಲ್ಲಿಮುಂಚಿತವಾಗಿ ಪ್ರಚಾರ ಕೈಗೊಳ್ಳಲು, ಬ್ಯಾನರ್ ಹಾಗೂ ಭಿತ್ತಿಪತ್ರ ಪ್ರದರ್ಶಿಸಲು, ಜಲ್ಲಿಒಡೆಯುವ, ಗಣಿಗಾರಿಕೆ ಹಾಗೂ ಕುರಿ ಕಾಯುವವರು ಸೇರಿದಂತೆ ಇತರೆ ವಲಸೆ ಕಾರ್ಮಿಕರ ಐದುವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಿಸುವಂತೆ ನಗರಾಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪೋಲಿಯೋ ಲಸಿಕೆಯನ್ನು ಸುರಕ್ಷಿತವಾಗಿಡಲು ಹಾಗೂ ಶೀತಲ ಪ್ಯಾಕ್ ಗಳನ್ನು ತಯಾರಿಸಲು ನಿರಂತರ ವಿದ್ಯುತ್ ಅವಶ್ಯಕತೆ ಇರುವುದರಿಂದ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರ ಪ್ರದೇಶಗಳಲ್ಲಿಪಲ್ಸ್ ಪೋಲಿಯೋ ಕಾರ್ಯಕ್ರಮದ ಮೊದಲ ಒಂದು ವಾರ ಹಾಗೂ ನಂತರದ ಮೂರು ದಿನಗಳವರೆಗೆ ವಿದ್ಯುತ್ ವ್ಯತ್ಯಯವಾಗದಂತೆ ನಿರಂತರ ವಿದ್ಯುತ್ ಸರಬರಾಜು ಮಾಡುವಂತೆ ಹೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಜಯಾನಂದ ಮಾತನಾಡಿ, ಜೂ. 28 ರಿಂದ ಜು.1ರ ವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ ಜರುಗಲಿದೆ. ಜೂ.28 ರಂದು ಬೂತ್ ಮಟ್ಟದಲ್ಲಿಹಾಗೂ ನಂತರದ ದಿನಗಳಲ್ಲಿಮನೆ ಮನೆ ಭೇಟಿ ನೀಡಲಾಗುವುದು. ಜಿಲ್ಲೆಯಲ್ಲಿಗ್ರಾಮೀಣ ಭಾಗದಲ್ಲಿ1,13,173 ಹಾಗೂ ನಗರ ಪ್ರದೇಶದಲ್ಲಿ38,135 ಸೇರಿ 1,51,308 ಸೊನ್ನೆಯಿಂದ ಐದು ಮಕ್ಕಳನ್ನು ಗುರುತಿಸಲಾಗಿದೆ. ಗ್ರಾಮೀಣ ಭಾಗದಲ್ಲಿ806 ಹಾಗೂ ನಗರ ಪ್ರದೇಶದಲಿ 192 ಸೇರಿ 998 ಬೂತ್ ಗಳನ್ನು ಗುರುತಿಸಲಾಗಿದೆ. ಇದಲ್ಲದೇ ಬಸ್ ನಿಲ್ದಾಣದಲ್ಲಿಬಸ್ ಗಳಲ್ಲಿಸಂಚರಿಸುವ ಮಕ್ಕಳಿಗೆ ಹಾಗೂ ರೈಲು ನಿಲ್ದಾಣದಲ್ಲಿನಿಲುಗಡೆಯಾದ ರೈಲಿನಲ್ಲಿರುವ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 1996 ವ್ಯಾಕ್ಸಿನೇಟರ್ಸ್ಗಳನ್ನು ಹಾಗೂ 201 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈಗಾಗಲೇ ಜಿಲ್ಲೆಗೆ ಅಗತ್ಯ ಲಸಿಕೆ ಸರಬರಾಜಾಗಿದೆ. 92 ಕೋಲ್ಡ್ ಚೈನ್ ಪಾಯಿಂಟ್ ಗಳನ್ನು ಗುರುತಿಸಲಾಗಿದೆ. 1,438 ಆಶಾ ಕಾರ್ಯಕರ್ತೆಯರು ಹಾಗೂ 1,895 ಅಂಗನವಾಡಿ ಕಾರ್ಯಕರ್ತೆಯರು ಈ ಕಾರ್ಯಕ್ರಮದಲ್ಲಿಭಾಗವಹಿಸಲಿದ್ದಾರೆ ಎಂದು ಸಭೆಗೆ ತಿಳಿಸಿದರು. ನಂತರ ಜಿಲ್ಲಾಧಿಕಾರಿಗಳು ಪಲ್ಸ್ ಪೋಲಿಯೋ ಕಾರ್ಯಕ್ರಮದ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆಗೊಳಿಸಿದರು.
ಜಿಲ್ಲಾಶಸ್ತ್ರ ಚಿಕಿತ್ಸಕ ಡಾ.ಪಿ.ಆರ್ .ಹಾವನೂರ, ಡಾ.ಜಗದೀಶ ಪಾಟೀಲ, ಡಾ.ನಿಲೇಶ, ಡಾ.ಚನ್ನವೀರಯ್ಯ ವಿರಕ್ತಮಠಮಠ, ಡಾ.ಸರಿತಾ, ಡಾ.ಪ್ರಭಾಕರ ಕುಂದೂರ ಸೇರಿದಂತೆ ತಾಲೂಕು ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.
ಪೋಟೋ 23 ಮಂಜು 3
ಹಾವೇರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಪಲ್ಸ್ ಪೋಲಿಯೋ ಕಾರ್ಯಕ್ರಮ ಕುರಿತು ಪೂರ್ವ ಸಿದ್ಧತಾ ಸಭೆ ನಡೆಸಿದರು. ಡಿಸಿ ವಿಜಯಮಹಾಂತೇಶ ದಾನಮ್ಮನವರ, ಅಧಿಕಾರಿಗಳು ಇದ್ದರು.