ವಿಕ ಸುದ್ದಿಲೋಕ ಗುರುಮಠಕಲ… ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳ ಸಮಸ್ಯೆಗಳನ್ನು ಆಲಿಸಿ, ಕಾನೂನು ಪ್ರಕಾರ ಪರಿಹಾರ ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹೇಳಿದರು. ತಾಲೂಕಿನ ಗಾಜರಕೋಟ ಗ್ರಾಮದಲ್ಲಿಯಾದಗಿರಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಯಲ್ಲಿಸಾರ್ವಜನಿಕರು ಕುಡಿಯುವ ನೀರು, ಚರಂಡಿ ವ್ಯವಸ್ಥೆ, ಸಮುದಾಯ ಭವನ, ಸ್ಮಶಾನ ಭೂಮಿ, ಗ್ರಂಥಾಲಯದ ಸ್ವಚ್ಛತೆ, ಬಾವಿಗಳ ಸಂರಕ್ಷಣೆ ಸೇರಿ ನಾನಾ ಮೂಲಸೌಕರ್ಯ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಸಮಸ್ಯೆಗಳನ್ನು ಪರಿಶೀಲಿಸಿ ಹಂತ ಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು. ಕುಂದುಕೊರತೆ ಸಭೆ ನಡೆಸುವ ಉದ್ದೇಶವೇ ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಪರಿಹಾರ ಕಂಡುಕೊಳ್ಳುವುದು. ಒಂದು ದಿನದಲ್ಲಿಎಲ್ಲಾ ಸಮಸ್ಯೆಗಳು ಬಗೆಹರಿಯಲು ಸಾಧ್ಯವಿಲ್ಲ. ಹಣಕಾಸು, ಸಾಮಗ್ರಿ ಹಾಗೂ ಮಾನವ ಸಂಪನ್ಮೂಲದ ಲಭ್ಯತೆಗೆ ಅನುಗುಣವಾಗಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು. ಎಸ್ ಸಿ-ಎಸ್ ಟಿ ಸಮುದಾಯದವರ ಮೇಲೆ ದೌರ್ಜನ್ಯ ಪ್ರಕರಣಗಳು ಬಂದರೆ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮೋಹರಂ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕು. ಜಿಲ್ಲೆಯಲ್ಲಿಹಿಂದಿನ ಘಟನೆಗಳ ಹಿನ್ನೆಲೆಯಲ್ಲಿಕೆಲವು ಗ್ರಾಮಗಳಲ್ಲಿಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಜಿಲ್ಲಾ ಸಲಹಾ ಸಮಿತಿ ಸದಸ್ಯ ಹಾಗೂ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಮರೆಪ್ಪ ಚಟ್ಟೇಕರ್ ಮಾತನಾಡಿ, ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅರಿಯಲು ಪೊಲೀಸ್ ಇಲಾಖೆ ನಡೆಸುತ್ತಿರುವ ಸಭೆಗಳು ಸಹಕಾರಿಯಾಗಿವೆ. ಪ್ರತಿ ತಿಂಗಳು ನಡೆಯುವ ಸಭೆಗಳ ಮೂಲಕ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ನಡೆಯುತ್ತಿದೆ ಎಂದರು. ಗಾಜರಕೋಟ ಗ್ರಾಮದಲ್ಲಿಅಸ್ಪೃಶ್ಯತೆ ಸಮಸ್ಯೆ ಇಲ್ಲದಿರುವುದು ಸಂತಸದ ವಿಷಯ. ಆದರೆ ಮೂಲಸೌಕರ್ಯಗಳ ಕೊರತೆ ಇದೆ. ಮಹಿಳಾ ಶೌಚಾಲಯ, ಸ್ಮಶಾನ ಭೂಮಿಯ ಹದ್ದುಬಸ್ತು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಡಿವೈಎಸ್ ಪಿ ಸುರೇಶ್ ಎಂ., ತಹಸೀಲ್ದಾರ್ ಚೆನ್ನಮಲ್ಲಪ್ಪ ಘಂಟಿ, ಪಿಐ ದೌಲತ್ ಎನ….ಕೆ. ಪಿಡಿಒ ಮಲ್ಲಿಕಾರ್ಜುನ ಸಜ್ಜನ…, ಸಮಾಜ ಕಲ್ಯಾಣ ಅಧಿ ಕಾರಿ ಶಿವಕುಮಾರ್ ಬಿರಾದಾ,ರ್ ಎಎಸ…ಐ ಚಂದ್ರರೆಡ್ಡಿ ಶರಣು ಪ್ರಸಾರ, ಶಿವರಾಮ ರಡ್ಡಿ, ರೇಣುಕ ರಾಜು, ಮಂಜುಳಾ ಹಾಗೂ ಕಂದಾಯ ಇಲಾಖೆ ಅಧಿ ಕಾರಿಗಳು, ಪೊಲೀಸ್ ಸಿಬ್ಬಂದಿ, ಗ್ರಾಮ ಪಂಚಾಯಿತಿ ಸಿಬ್ಬಂದಿ, ಸಮಾಜದ ಮುಖಂಡರು ಹಾಗೂ ಗ್ರಾಮಸ್ಥರು ಸೇರಿದಂತೆ ಇತರರು ಇದ್ದರೂ.