ಕೊಪ್ಪಳ: ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ರೈತರು ತೋಟಗಾರಿಕೆ ಬೆಳೆಗಳನ್ನು ವಿಮೆಗೆ ಒಳಪಡಿಸಬಹುದು ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರಾದ ಕೃಷ್ಣ ಸಿ. ಉಕ್ಕುಂದ ತಿಳಿಸಿದ್ದಾರೆ. ಪಪ್ಪಾಯ, ಮಾವು, ದ್ರಾಕ್ಷಿ, ದಾಳಿಂಬೆ, ಹಸಿಮೆಣಸಿನಕಾಯಿ ಮತ್ತು ಈರುಳ್ಳಿ, ಟೊಮೆಟೊ, ಈರುಳ್ಳಿ ಬೆಳೆಗಳನ್ನು ವಿಮೆಗೆ ಒಳಪಡಿಸಬಹುದು. ವಿಮಾ ವಂತಿಗೆಯನ್ನು ಜುಲೈ 31 ರೊಳಗೆ ಪಾವತಿಸಿದಲ್ಲಿಪ್ರಯೋಜನ ಪಡೆಯಬಹುದು. ಮಾಹಿತಿಗೆ ತಾಲೂಕು, ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳು ಹಾಗೂ ಕೃಷಿ ಅಧಿಕಾರಿಗಳು, ಬ್ಯಾಂಕ್ , ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಯೋಜನೆಯಡಿ ಆಯ್ಕೆಯಾಗಿರುವಗ್ರಾಮ ಪಂಚಾಯಿತಿ ಮತ್ತು ಬೆಳೆಗಳ ಬಗ್ಗೆ ಮಾಹಿತಿ ಪಡೆದಕೊಳ್ಳುವಂತೆ ಕೊಪ್ಪಳ ತೋಟಗಾರಿಕೆ ಇಲಾಖೆಯ ಪ್ರಕಟಣೆ ತಿಳಿಸಿದೆ.
========
ವಿದ್ಯಾರ್ಥಿವೇತನಕ್ಕೆ ಅರ್ಜಿ
ಕೊಪ್ಪಳ: ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ 1 ರಿಂದ 8ನೇ ತರಗತಿಯಲ್ಲಿವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಜಿಲ್ಲಾಅಲ್ಪಸಂಖ್ಯಾತರ ಕಚೇರಿ ಹಾಗೂ ಜಿಲ್ಲಾಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ದೂರವಾಣಿ ಸಂಖ್ಯೆ 08539-225070, ಮೊ. ಸಂಖ್ಯೆಗೆ 8861610578 ಸಂಪರ್ಜಿಸಬಹುದು ಎಂದು
ಕೊಪ್ಪಳ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ರವಿ ಪೂಜಾರ ಪ್ರಕಟಣೆಯಲ್ಲಿತಿಳಿಸಿದ್ದಾರೆ.