ಅರ್ಜಿ ಆಹ್ವಾನ
ರಾಯಚೂರು: ದ್ವಿದಳ ಧಾನ್ಯಗಳಲ್ಲಿಆತ್ಮ ನಿರ್ಭರತೆ ಅಭಿಯಾನದಡಿ ದ್ವಿದಳ ಧಾನ್ಯಗಳಲ್ಲಿಮೌಲ್ಯವರ್ಧನೆ ಉತ್ತೇಜಿಸಲು ಹಾಗೂ ರೈತರ ಆದಾಯ ಹೆಚ್ಚಿಸಲು ಕೊಯ್ಲೋತ್ತರ ಮೂಲ ಸೌಕರ್ಯಾಭಿವೃದ್ಧಿಗಾಗಿ ಸಂಸ್ಕರಣೆ ಹಾಗೂ ಪ್ಯಾಕೇಜಿಂಗ್ ಘಟಕ ಸ್ಥಾಪಿಸಲು ಅರ್ಹ ರೈತರು, ವೈಯಕ್ತಿಕ ಫಲಾನುಭವಿಗಳು, ರೈತ ಉತ್ಪಾದಕ ಸಂಸ್ಥೆಗಳು, ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಹಾಗೂ ನೋಂದಾಯಿತ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯೋಜನಾ ವೆಚ್ಚದ ಶೇ.15 ರಷ್ಟು ಸ್ವಂತ ಬಂಡವಾಳ ಹೂಡಿಕೆ ಮಾಡಬೇಕು. ಕೇಂದ್ರ ಹಾಗೂ ರಾಜ್ಯ ಸರಕಾರದ 60:40 ಅನುಪಾತದಡಿ, ಯೋಜನಾ ವೆಚ್ಚದ ಶೇ.33 ರಷ್ಟು ಸಹಾಯಧನ (ಗರಿಷ್ಠ 25 ಲಕ್ಷ ರೂ. ಮಿತಿ) ನೀಡಲಾಗುವುದು. ಆಸಕ್ತರು ಸಂಬಂಧಿಸಿದ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಜೂ.30ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರು ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

