ವಿಕ ಸುದ್ದಿಲೋಕ ಬಾಗೇಪಲ್ಲಿ
ಬಾಗೇಪಲ್ಲಿಯ ಕನ್ನಡ ಸಾಹಿತ್ಯ ಪರಿಷತ್ತು ಕಸಾಪ ಕಚೇರಿಯಲ್ಲಿರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಚಿನ್ನ ಕೈವಾರಮಯ್ಯ ವಹಿಸಿದ್ದರು.
ಮುಖ್ಯ ಭಾಷಣಕಾರ ಹೆಚ್ .ಆರ್ . ಸುಬ್ರಮಣ್ಯ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿಯ ಆಡಳಿತ, ಶಿಕ್ಷಣ, ಸಾಹಿತ್ಯ, ಸಂಸ್ಕೃತಿ ಹಾಗೂ ಸಾಮಾಜಿಕ ಅಭಿವೃದ್ಧಿಗೆ ನೀಡಿದ ಅಮೂಲ್ಯ ಕೊಡುಗೆಗಳ ಕುರಿತು ವಿವರಿಸಿದರು.
ಮುಖ್ಯ ಅತಿಥಿ ಕಸಾಪ ಗೌರವ ಕಾರ್ಯದರ್ಶಿ ಶ್ರೀನಿವಾಸ್ ಬಾಣಾಲಪಲ್ಲಿಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಾಧನೆಗಳು ಹಾಗೂ ಕನ್ನಡ ಸಾಹಿತ್ಯದ ಬೆಳವಣಿಗೆಗೆ ಅವರು ಸಲ್ಲಿಸಿದ ಅನನ್ಯ ಸೇವೆಯನ್ನು ಸ್ಮರಿಸಿದರು. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಅಭಿವೃದ್ಧಿಗೆ ಅವರು ನೀಡಿದ ಪ್ರೋತ್ಸಾಹ ಇಂದಿಗೂ ಮಾದರಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿಪಿ.ಜಿ. ಶಿವಶಂಕರಾಚಾರಿ ಅವರಿಂದ ಗೀತ ಗಾಯನ ನಡೆಯಿತು. ಈ ಸಂದರ್ಭದಲ್ಲಿಚನ್ನರಾಯಪ್ಪ, ಆಂಜನಪ್ಪ, ರಾಜರಾಜೇಶ್ವರಿ, ಸುಕನ್ಯ, ವೆಂಕಟೇಶ್ , ಜ್ಯೋತಿ, ಸುಜಾತ ಹಾಗೂ ವಲಿ ಭಾಷ, ಜೀವಿಕ ಚೌಡಯ್ಯ, ಈಶ್ವರಪ್ಪ ಸೇರಿದಂತೆ ಹಲವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಕಾರ್ಯಕ್ರಮವು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆದರ್ಶಗಳು ಮತ್ತು ಕನ್ನಡ ನಾಡಿಗೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸುವ ಮೂಲಕ ಅರ್ಥಪೂರ್ಣವಾಗಿ ನೆರವೇರಿತು.

