ಚಿತ್ರ: 5ಜಿಎಲ್ ಬಿ10
ಹಾಸ್ಟೆಲ್ ನ ರೇಷನ್ ಮಾಡಿಕೊಂಡವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜಿಲ್ಲಾ ಘಟಕದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
***
*ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾಘಟಕದಿಂದ ಪ್ರತಿಭಟನೆ, ಮನವಿ ಸಲ್ಲಿಕೆ
ಹಾಸ್ಟೆಲ್ ರೇಷನ್ ಮಾರಿಕೊಂಡವರ ವಿರುದ್ಧ ಕ್ರಮಕ್ಕೆ ಆಗ್ರಹ
ವಿಕ ಸುದ್ದಿಲೋಕ ಕಲಬುರಗಿ
ನಗರದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿನಂ.5ರಲ್ಲಿವಿದ್ಯಾರ್ಥಿನಿಯರ ಸಿಗಬೇಕಾದ ಅಕ್ಕಿ, ಬೇಳೆ, ಶುಚಿ ಕಿಟ್ ಗಳನ್ನು ಮಾರಾಟ ಮಾರಿಕೊಂಡವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜಿಲ್ಲಾ ಘಟಕದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿಮಾತನಾಡಿದ ವಿದ್ಯಾರ್ಥಿ ಮುಖಂಡರು, ಹಾಸ್ಟೆಲ್ ಗಳಲ್ಲಿವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಊಟ ಇಲ್ಲ, ಸ್ವಚ್ಛತೆ ಇಲ್ಲ, ಕುಡಿಯುವ ನೀರು ಇಲ್ಲದಂತಾಗಿದೆ. ವಿದ್ಯಾರ್ಥಿನಿಯರಿಗೆ ಶೌಚಾಲಯ ಶುಚಿ ಇಲ್ಲದಂತಾಗಿದೆ. ಇನ್ನು ಸಕರಾದ ಶುಚಿ ಕಿಟ್ ಕೂಡ ನೀಡುತ್ತಿಲ್ಲ. ಈ ಬಗ್ಗೆ ಮೇಲ್ವಿಚಾರಕರಿಗೆ ಪ್ರಶ್ನಿಸಿದರೆ ‘ಹಣ ಕೊಟ್ಟು ಖರೀದಿಸಿ ಮಾಡಿ’ ಎಂದು ಹೇಳುತ್ತಾರೆ ಎಂದು ದೂರಿದರು.
ವಿದ್ಯಾರ್ಥಿಗಳ ಹೆಸರಿನಲ್ಲಿಬರುವ ಅನುದಾನ ಮತ್ತು ರೇಷನ್ ಅನ್ನು ದುರುಪಯೋಗಪಡಿಸಿಕೊಂಡು ಭ್ರಷ್ಟಾಚಾರ ನಡೆಸುವವರ ವಿರುದ್ಧ ತಕ್ಷಣ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಬಡ ಹಾಗೂ ಗ್ರಾಮೀಣ ಹಿನ್ನೆಲೆಯಲ್ಲಿನ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುವ ಅಧಿಕಾರಿಗಳನ್ನು ಯಾವುದೇ ಕಾರಣಕ್ಕೂ ರಕ್ಷಿಸಬಾರದು. ರೇಷನ್ ಅಕ್ರಮದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ಎಬಿವಿಪಿ ನಗರ ಕಾರ್ಯದರ್ಶಿ ಶರಣು ಪೂಜಾರಿ, ಜಿಲ್ಲಾ ಸಂಚಾಲಕ ಮಂಜುನಾಥ ಕೊನ್ನೂರ, ವಿಭಾಗ ಸಂಘಟನ ಕಾರ್ಯದರ್ಶಿ ಹೇಮಂತ, ಶ್ರವಣ, ಸಂದೇಶ, ಮನೋಜಪಾಟೀಲ, ಜಗಳಪ್ಪ ಹಾಗೂ ವಸತಿ ನಿಲಯದ ವಿದ್ಯಾರ್ಥಿನಿಯರ ಇದ್ದರು.
**
ಬೇಡಿಕೆಗಳು
* ವಿದ್ಯಾರ್ಥಿನಿಯರಿಗಾಗಿ ಮೀಸಲಾದ ರೇಷನ್ ದುರ್ಬಳಕೆ ಕುರಿತು ಕ್ರಿಮಿನಲ್ ಪ್ರಕರಣ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು
* ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು.
* ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಹಾಗೂ ಪೌಷ್ಟಿಕ ಆಹಾರ, ಶುಚಿ ಕಿಟ್ ಒದಗಿಸಬೇಕು
* ಶುದ್ಧ ಕುಡಿಯುವ ನೀರು ಸೇರಿ ಮೂಲ ಸೌಲಭ್ಯ ಕಲ್ಪಿಸಬೇಕು.
* ಗ್ರಂಥಾಲಯಕ್ಕೆ ಮ್ಯಾಜಜಿನ್ , ಪ್ರತಿದಿನ ವಾರ್ತಾಪತ್ರಿಕೆ ನೀಡಬೇಕು.

