ಪೇಜ್ 4 ಸುದ್ದಿ ಫೈಲ್ 3

Contributed byDHEERAJ K|Vijaya Karnataka

ಬೆಂಗಳೂರಿನ ಉತ್ತರಹಳ್ಳಿಯ ವಿಶ್ವಭಾರತಿ ಪದವಿ ಪೂರ್ವ ಕಾಲೇಜು ಮತ್ತು ಪೆಡರಲ್‌ ಕಾಲೇಜ್‌ ಆಫ್‌ ಮ್ಯಾನೇಜ್‌ಮೆಂಟ್‌ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದವು. ಉಚಿತ ಸಸ್ಯ ವಿತರಣೆ ಹಾಗೂ ಪರಿಸರ ಜಾಗೃತಿ ಜಾಥಾ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಪರಿಸರದ ಮಹತ್ವವನ್ನು ಸಾರುವ ಈ ಆಚರಣೆ ಗಮನ ಸೆಳೆಯಿತು.

students participation in environmental day rally and plant distribution

ಬೆಂಗಳೂರಿನ ಉತ್ತರಹಳ್ಳಿಯ ವಿಶ್ವಭಾರತಿ ಪದವಿ ಪೂರ್ವ ಕಾಲೇಜು ಹಾಗೂ ಪೆಡರಲ್ ಕಾಲೇಜ್ ಆಫ್ ಮ್ಯಾನೇಜ್ ಮೆಂಟ್ ಶುಕ್ರವಾರ ಪರಿಸರ ದಿನವನ್ನು ವಿಶಿಷ್ಟವಾಗಿ ಆಚರಿಸಿತು. ಕಾಲೇಜಿನ ವತಿಯಿಂದ ಉತ್ತರಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮದ ಜನತೆಯ ಉಚಿತವಾಗಿ ಸಸ್ಯಗಳನ್ನು ವಿತರಿಸಲಾಯಿತು. ಇದೇ ಸಂದರ್ಭ, ಪರಿಸರದ ಬಗ್ಗೆ ಕಾಳಜಿ ವಹಿಸುವಂತೆ ಕೋರಿ ವಿದ್ಯಾರ್ಥಿಗಳಿಂದ ಜಾಥಾವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿಕಾಲೇಜಿನ ಮುಖ್ಯಸ್ಥರಾದ ಕಿರಣ್ ಕೆಸಿ, ಮಧು ಡಿ.ಜಿ. ಹಾಗೂ ಎಸ್ ಲಕ್ಷ್ಮೇಕಾಂತ, ಸಿಬ್ಬಂದಿ ವರ್ಗ ಹಾಗೂ ಎಲ್ಲಾವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಫೋಟೊ: ಉತ್ತರಹಳ್ಳಿ